More

  ಡುಮ್ಮಿ ಎಂದು ಹೀಯಾಳಿಸಿದ ಪತಿ; ಮನನೊಂದು ಪ್ರಾಣ ಬಿಟ್ಟ ಬೆಂಗಳೂರಿನ ಮಹಿಳೆ

  ಬೆಂಗಳೂರು:   ಡುಮ್ಮಿ ಎಂದು ಪತಿ ಹೀಯಾಳಿಸಿ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತು ಬೆಂಗಳೂರಿನ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಘಟನೆ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

   ಸಂಧ್ಯಾ (31) ಮೃತ ಮಹಿಳೆ. ಮಂಜುನಾಥ ನಗರದ ನಿವಾಸಿಯಾಗಿದ್ದಾಳೆ. ಖಾಸಗಿ ಪ್ರೌಢ ಶಾಲೆ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಡುಮ್ಮಿ ಎಂದು ಪತಿ ಹೀಯಾಳಿಸಿ ಗಲಾಟೆ ಮಾಡುತ್ತಿದ್ದರಿಂದ ಬೇಸತ್ತು ಪ್ರಾಣ ಕಳೆದುಕೊಂಡಿದ್ದಾಳೆ ಎನ್ನಲಾಗಿದೆ.

  ನಡೆದಿದ್ದೇನು?:   ಸಂಧ್ಯಾ, ಜಯಪ್ರಕಾಶ್  ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದೆ.  ಆ ಮಗುವಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿತ್ತು. ಇನ್ನು ಮಗನ ವೈದ್ಯಕೀಯ ಚಿಕಿತ್ಸೆಗೆ ದಂಪತಿ ಸಾಕಷ್ಟು ಹಣ ವ್ಯಯಿಸಿದ್ದರು. ಇದೇ ವಿಚಾರವಾಗಿ ಸಂಧ್ಯಾ ಮತ್ತು ಜಯಪ್ರಕಾಶ್ ಮಧ್ಯೆ ಮನಸ್ತಾಪವಾಗಿತ್ತು ಎನ್ನಲಾಗಿದೆ. ಇದಾದ ಬಳಿಕ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾಗ ಸಂಧ್ಯಾ ಅವರಿಗೆ ಗರ್ಭಪಾತವಾಯಿತು. ಇದರಿಂದ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಿ ಅ‍ವರು ದಪ್ಪವಾಗಿದ್ದರು. ತರುವಾಯ ಸಣ್ಣಪುಟ್ಟ ವಿಚಾರಗಳಿಗೆ ಜಗಳ ತೆಗೆದು ಪತ್ನಿ ಮೇಲೆ ಜಯಪ್ರಕಾಶ್ ಗಲಾಟೆ ಮಾಡುತ್ತಿದ್ದರು. ಅಲ್ಲದೆ ಪತ್ನಿಯನ್ನು ಡುಮ್ಮಿ ಎಂದು ಆತ ಹೀಯಾಳಿಸುತ್ತಿದ್ದ.  

  ಮನೆಯಲ್ಲಿ ಗುರುವಾರ ಸಂಜೆ ನೇಣು ಬಿಗಿದುಕೊಂಡು ಸಂಧ್ಯಾ ಆತ್ಮಹತ್ಯೆ ಯತ್ನಿಸಿದ್ದಾರೆ. ತಕ್ಷಣವೇ ಆಕೆಯನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ಕುಟುಂಬದವರು ಕರೆದೊಯ್ದಿದು ದಾಖಲಿಸಿದ್ದಾರೆ. ಆದರೆ ಆ ವೇಳೆಗೆ ಸಂಧ್ಯಾ ಕೊನೆಯುಸಿರೆಳೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts