ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಲೋಕಸಭೆ ಚುನಾವಣೆಯ ಕಣ ರಂಘೇರುತ್ತಿದ್ದು, ರಾಜಕೀಯ ಪಕ್ಷಗಳು ಮತಬೇಟೆಯಲ್ಲಿ ನಿರತವಾಗಿವೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಪೋಸ್ಟರ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ-ಪ್ರತ್ಯಾರೋಪ ಮಾಡುವುದು ಸಹಜ. ಆದರೆ, ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಪೂಜಾ ವಸ್ತ್ರಾಕರ್ ಬಿಜೆಪಿ ನಾಯಕರನ್ನು ಟೀಕಿಸುವ ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಅವರು ಡಿಲೀಟ್ ಮಾಡಿದ್ದಾರೆ.

ವೈರಲ್ ಆಗಿರುವ ಪೋಸ್ಟರ್ನಲ್ಲಿ ವಸೂಲಿ ಟೈಟಾನ್ಸ್ ಎಂದು ತಲೆಬರಹ ನೀಡಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಷಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಅನೇಕ ಬಿಜೆಪಿ ನಾಯಕರ ಫೋಟೋ ಬಳಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದರ ಸ್ಕ್ರೀನ್ಶಾಟ್ ಅನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಇದು ಆಟಗಾರ್ತಿಯ ಭವಿಷ್ಯಕ್ಕೆ ಮುಳುವಾಗಿ ಪರಿಣಮಿಸಬಹುದು ಎಂದು ಹೇಳಲಾಗಿದೆ.
Pooja vastrakar Indian allrounder story 😭
— Raja Babu (@GaurangBhardwa1) March 29, 2024
Account hack bolegi 🤩 pic.twitter.com/C8wvm5Es6Z
ಇದನ್ನೂ ಓದಿ: ನನ್ನ ತಂದೆಗೆ ಸ್ಲೋ ಪಾಯ್ಸನ್ ನೀಡಲಾಗಿದೆ; ಮುಖ್ತಾರ್ ಪುತ್ರನ ಆರೋಪದ ಬೆನ್ನಲ್ಲೇ ತನಿಖೆಗೆ ಆದೇಶಿಸಿದ ಸರ್ಕಾರ
ಕೇಂದ್ರೀಯ ಏಜೆನ್ಸಿಗಳ ಪರಿಶೀಲನೆಯಿಂದ ತಪ್ಪಿಸಿಕೊಳ್ಳಲು ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ದಂಧೆಯಲ್ಲಿ ಬಿಜೆಪಿ ತೊಡಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಲಯದಲ್ಲಿ ಆರೋಪಿಸಿದ ಒಂದು ದಿನದ ಬಳಿಕ ಈ ಬಗ್ಗ ಪೋಸ್ಟ್ ಮಾಡಲಾಗಿದ್ದು, ವ್ಯಾಪಕಲ ಚರ್ಚೆಯನ್ನು ಹುಟ್ಟುಹಾಕಿದೆ.
ಇತ್ತ ಪೋಸ್ಟ್ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ಇವರು ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳನ್ನು ಬೆಂಬಲಿಸುತ್ತಾರೆ ಎಂದರೆ. ನಿಮ್ಮ ವೃತ್ತಿ ಜೀವನದ ಮೇಲೆ ಇದು ಪರಿಣಾಮ ಬೀರುತ್ತದೆ ಎಂದು ತಿಳಿದಿದ್ದು ಈ ರೀತಿ ಮಾಡಿದರೆ ಅದು ನಿಮ್ಮ ಮೂರ್ಖತನ ಎಂದು ಹಲವರು ಕಮೆಂಟ್ ಮಾಡಿದ್ದಾರೆ. ಕೆಲವರು ಪೂಜಾ ಅವರು ನನ್ನ ಅಕೌಂಟ್ ಹ್ಯಾಕ್ ಆಗಿತ್ತು ಎಂದು ಹೇಳಿ ಎಸ್ಕೇಪ್ ಆಗುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಪೂಜಾ ವಸ್ತ್ರಾಕರ್ ಅವರು ಪ್ರಸ್ತುತ ಮಧ್ಯಪ್ರದೇಶ ಮತ್ತು ಭಾರತಕ್ಕಾಗಿ ಆಡುತ್ತಿದ್ದಾರೆ.