ಭಾರಿ ಮಳೆಗೆ ನಿರ್ಮಾಣ ಹಂತದ ಕಟ್ಟಡದಿಂದ ಇಟ್ಟಿಗೆ ಬಿದ್ದು ಮಹಿಳೆ ಸಾವು

Woman Death
Published on

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್​ ಇಟ್ಟಿಗೆ ಬಿದ್ದು ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಗರದ ರಾಮಣ್ಣ ಬ್ಲಾಕ್ ನಂದಿನಿ ಲೇಟೌಟ್​ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಶಿಲ್ಪಾ (22) ಮೃತ ದುರ್ದೈವಿ. ಇಂದು ನಗರದಲ್ಲಿ ಬಿರುಗಾಳಿ ಸಹಿತ ಸುರಿದ ಭಾರಿ ಮಳೆಗೆ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಿಂದ ಇಟ್ಟಿಗೆಗಳು ಪಕ್ಕದ ಮನೆಯ ಮೇಲೆ ಬಿದ್ದು, ದುರ್ಘಟನೆ ಸಂಭವಿಸಿದೆ.

ಈ ವೇಳೆ ಧನುಷ್ ಎಂಬ ಮತ್ತೊಬ್ಬ ಹುಡುಗನಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ನಂದಿನಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net