

ನೆಲಮಂಗಲ: ನಿನ್ನೆಯಷ್ಟೇ ಎರಡು ಕೆಎಸ್ಆರ್ಟಿಸಿ ಬಸ್ಗಳು ಪಲ್ಟಿಯಾಗಿ ಅಪಘಾತ ಸಂಭವಿಸಿದ ಎರಡು ಪ್ರತ್ಯೇಕ ಪ್ರಕರಣಗಳು ನಡೆದಿದ್ದು, ಒಟ್ಟು ಮೂವರು ಸಾವಿಗೀಡಾಗಿ ಸುಮಾರು 50 ಮಂದಿ ಗಾಯಗೊಂಡಿದ್ದರು. ಇಂದು ಮತ್ತೊಂದು ಕೆಎಸ್ಆರ್ಟಿಸಿ ಬಸ್ ಅಪಘಾತಕ್ಕೀಡಾಗಿದ್ದು, ಮಹಿಳೆಯೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-75ರ ಕುಣಿಗಲ್ ರಸ್ತೆ ನೆಲಮಂಗಲದ ಮಹದೇವಪುರ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಗುರುವನಹಳ್ಳಿ ಶೋಭಾ (26) ಸ್ಥಳದಲ್ಲೇ ಸಾವಿಗೀಡಾಗಿದ್ದು, ಸುನೀಲ್, ಜೈಲವುದೀನ್, ಹುಸೇನ್‌ಬೀ, ಕಮಲ್ ಉದ್ದೀನ್ ಮತ್ತು ಹನುಮಂತರಾಜು ಎಂಬವರು ಗಾಯಗೊಂಡಿದ್ದಾರೆ.
ಟ್ರ್ಯಾಕ್ಟರ್ನಿಂದ ಹೆದ್ದಾರಿ ಬದಿಯ ಗಿಡಗಳಿಗೆ ನೀರು ಹಾಯಿಸುತ್ತಿದ್ದಾಗ ಬಸ್ ಬಂದು ಡಿಕ್ಕಿ ಹೊಡೆದಿದ್ದರಿಂದ ಶೋಭಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಳುಗಳಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಸಂಭವಿಸಿದೆ.