More

  ಲಾರಿ ಡಿಕ್ಕಿಯಾಗಿ ಮಹಿಳೆ ಸಾವು

  ಗಂಗೊಳ್ಳಿ: ಕುಂದಾಪುರದ ಫುಡ್‌ಮಾರ್ಕ್ ಹೋಟೆಲ್ ಎದುರಿನ ರಾಷ್ಟ್ರೀಯ ಹೆದ್ದಾರಿ 66ರ ಉಡುಪಿ-ಬೈಂದೂರು ಏಕಮುಖ ರಸ್ತೆಯಲ್ಲಿ ರಸ್ತೆ ದಾಟಲು ನಿಂತಿದ್ದ ರಾಧಾ(71) ಎಂಬುವರಿಗೆ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ.

  ಉಡುಪಿ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಅವರ ಸೊಂಟದ ಮೇಲೆ ಲಾರಿ ಚಕ್ರ ಹತ್ತಿ ತೀವ್ರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕುಂದಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಮೃತಪಟ್ಟಿದ್ದರು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts