More

    ಹನುಮ ಜಯಂತಿಯಲ್ಲಿ ಲಡ್ಡು ಸೇವಿಸಿದ್ದ ಮಹಿಳೆ ಸಾವು; 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ

    ಹೊಸಕೋಟೆ: ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ನಡೆದಿದ್ದು, 100ಕ್ಕೂ ಹೆಚ್ಚು ಭಕ್ತರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದನ್ನೂ ಓದಿ: ಶರವೇಗದಲ್ಲಿ ಹಬ್ಬುತ್ತಿದೆ ಕರೋನಾ: 4 ಸಾವಿರ ದಾಟಿದ ಸಕ್ರಿಯ ಪ್ರಕರಣ..
    ಇವರಲ್ಲಿ ಇನ್ನೂ 15 ಮಂದಿ ಆರೋಗ್ಯ ಗಂಭೀರವಾಗಿದೆ ಎಂದು ಹೇಳಲಾಗಿದೆ. ಹೊಸಕೋಟೆಯ ಕಾವೇರಿನಗರದ ನಿವಾಸಿ 60 ವರ್ಷದ ಸಿದ್ದಗಂಗಮ್ಮ ಮೃತದುರ್ದೈವಿ.

    ಶನಿವಾರ ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಳಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು. ದೇವಾಲಯಗಳಲ್ಲಿ ಪ್ರಸಾದ ತಿಂದಿದ್ದ ಭಕ್ತರು ರಾತ್ರಿಯಿಂದಲೇ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಇವರನ್ನು ಹೊಸಕೋಟೆ, ಕೋಲಾರ ಮತ್ತಿತರ ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದ ಅಸ್ವಸ್ಥರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಆದರೂ ಪ್ರಸಾದ ಸೇವಿಸಿದವರಲ್ಲಿ 15 ಮಂದಿಯ ಆರೋಗ್ಯ ಗಂಭೀರವಾಗಿದೆ. ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಗಂಗಮ್ಮ ಅವರು ಯಾವುದೇ ದೇವಸ್ಥಾನಕ್ಕೆ ಹೋಗಿರಲಿಲ್ಲ. ಅವರ ಪತಿ ಶಿವಣ್ಣ ತಂದು ಕೊಟ್ಟ ಲಾಡು ತಿಂದಿದ್ದರು. ಬೆಳಗ್ಗೆಯಿಂದಲೇ ಅವರು ವಾಂತಿ ಭೇದಿಯಿಂದ ಬಳಲುತ್ತಿದ್ದರು.

    ಕಡೆಗೆ ಸಂಜೆ ವೇಳೆಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ. ದೇವಾಲಯಗಳಲ್ಲಿ ಪ್ರಸಾದ ತಿಂದಿದ್ದ 100ಕ್ಕೂ ಹೆಚ್ಚು ಭಕ್ತರು ರಾತ್ರಿಯಿಂದಲೇ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು ಎಂದು ಗೊತ್ತಾಗಿದೆ. ಈವರೆಗೂ 70ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದು ಯಾವುದೇ ಅಪಾಯ ಇಲ್ಲದೆ ಮನೆಗೆ ಮರಳಿದ್ದಾರೆ. ಖಾಸಗಿ ಆಸ್ಪತ್ರೆಗೆ ಹೆಚ್ಚುವರಿ ಎಸ್​ಪಿ ಪುರುಷೋತ್ತಮ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಕೈಗೊಂಡಿದ್ದಾರೆ.

    ಲಾಡು ತಯಾರಿಸುವಾಗ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಹೇಳಲಾಗುತ್ತಿದೆ. ಸಾಮಾನ್ಯವಾಗಿ ದೀರ್ಘ ಕಾಲದವರೆಗೆ ಪಾತ್ರೆಗಳನ್ನು ಬಳಸದಿದ್ದರೆ ತುಕ್ಕು ಹಿಡಿಯುತ್ತವೆ. ಕಲಾಯಿ ಮಾಡಿಯೇ ಬಳಸಬೇಕು. ಹಾಗೆ ಮಾಡಿಲ್ಲದಿದ್ದರೆ ಆಹಾರ ಕಲುಷಿತವಾಗಿರುವ ಸಾಧ್ಯತೆ ಹೆಚ್ಚು. ಇಲ್ಲಿಯೂ ಹಾಗೆಯೇ ಆಗಿರಬಹುದು ಎಂದು ಶಂಕಿಸಲಾಗಿದೆ. ಆದರೆ ನಿಖರ ಕಾರಣ ತಿಳಿದು ಬಂದಿಲ್ಲ.

    ಸಿಂಹ, ಘೇಂಡಾಮೃಗಗಳೊಂದಿಗೆ ಸೆಲ್ಫಿ.. ವನ್ಯಜೀವಿ ಸಫಾರಿಯಲ್ಲಿ ಭಾರತೀಯ ಕ್ರಿಕೆಟಿಗರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts