ದೀಪಾವಳಿಗೆ ಗಂಡ ತವರು ಮನೆಗೆ ಬರಲಿಲ್ಲ ಎಂದು ವಿಡಿಯೋ ಕಾಲ್ ಮಾಡಿ ಜಗಳ ಆಡುತ್ತ ಪ್ರಾಣ ಕಳ್ಕೊಂಡ್ಲು ಗರ್ಭಿಣಿ ಪತ್ನಿ!

Woman Video call
ಸಾಂದರ್ಭಿಕ ಚಿತ್ರ
Published on

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಗಂಡ ತವರು ಮನೆಗೆ ಬರಲಿಲ್ಲ ಎಂದು ಸಿಟ್ಟಾದ ಪತ್ನಿ, ಪತಿಗೆ ವಿಡಿಯೋ ಕಾಲ್ ಮಾಡಿ ಬೈದು ಆತ್ಮಹತ್ಯೆ ಮಾಡಿಕೊಂಡ ಪ್ರಕರಣವೊಂದು ನಡೆದಿದೆ. ರಾಜಧಾನಿ ಬೆಂಗಳೂರಿನ ಭಾರತಿನಗರದಲ್ಲಿ ಈ ಪ್ರಕರಣ ನಡೆದಿದೆ.

ಭಾರತಿನಗರ ನಿವಾಸಿ ಆರ್​. ದೇವಿಕಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. 21 ವರ್ಷದ ಈಕೆ ಪತಿಯೊಂದಿಗೆ ವಿಡಿಯೋ ಕಾಲ್​ನಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಉಮೇಶ್ ವಿರುದ್ಧ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೀಪಾವಳಿಗೆಂದು ತವರು ಮನೆಗೆ ಬಂದಿದ್ದ ಈಕೆ ಹಬ್ಬಕ್ಕೆ ಪತಿ ಅಲ್ಲಿಗೆ ಬರಲಿಲ್ಲ ಎಂದು ಮಂಗಳವಾರ ವಿಡಿಯೋ ಕಾಲ್ ಮಾಡಿ ತರಾಟೆಗೆ ತೆಗೆದುಕೊಂಡು, ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪತಿ ಆಕೆಯನ್ನು ತಡೆಯುವ ಬದಲು ಆತ್ಮಹತ್ಯೆಯ ಲೈವ್ ವಿಡಿಯೋ ನೋಡಿ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ದೇವಿಕಾ ಸಂಬಂಧಿಕರು ಪೊಲೀಸರಿಗೆ ದೂರು ನೀಡಿದ್ದಾರೆ.

ದೇವಿಕಾ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿ ಆಗಿದ್ದಳು ಎಂಬುದು ತಿಳಿದುಬಂದಿದೆ. ಇಬ್ಬರದ್ದೂ ಪ್ರೇಮ ವಿವಾಹವಾಗಿದ್ದು, ಇದಕ್ಕೆ ಮನೆಯವರ ಒಪ್ಪಿಗೆ ಇರಲಿಲ್ಲ ಎಂದೂ ಹೇಳಲಾಗಿದೆ. ಆರೋಪಿ ಪತಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net