ವಾಹನ ಡಿಕ್ಕಿಯಾಗಿ ಮಹಿಳೆ ಮೃತ್ಯು

accident raichur
Published on

ಬಂಟ್ವಾಳ: ದ್ವಿಚಕ್ರ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಮಿತ್ತಬೈಲುವಿನಲ್ಲಿ ನಡೆದಿದೆ. ಪುದು ಗ್ರಾಮದ ಬೀಪಾತುಮ್ಮ ಮೃತಪಟ್ಟವರು. ಮಿತ್ತಬೈಲು ಮೊಹಿದ್ದೀನ್ ಜುಮ್ಮಾ ಮಸೀದಿ ಹಾಲ್‌ನಲ್ಲಿದ್ದ ಮದುವೆ ಕಾರ್ಯಕ್ರಮ ಮುಗಿಸಿ ಮಿತ್ತಬೈಲು ಜುಮ್ಮಾ ಮಸೀದಿ ಎದುರು ಹೆದ್ದಾರಿ ದಾಟಲು ರಸ್ತೆ ಬದಿಯಲ್ಲಿ ನಿಂತಿರುವಾಗ ಮಂಗಳೂರು ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಬಂದ ಮೋಟಾರ್ ಸೈಕಲ್ ಸವಾರ ಮಿಥುನ್ ಬೀಪಾತುಮ್ಮ ಅವರಿಗೆ ಡಿಕ್ಕಿಹೊಡೆದ ಪರಿಣಾಮ, ರಸ್ತೆಗೆ ಬಿದ್ದು ತಲೆ, ಕೈಕಾಲು, ಎದೆಗೆ ಗಾಯವಾಗಿದ್ದು ಮಂಗಳೂರು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಸಯ್ಯದ್ ಎಸ್.ನೀಡದ ದೂರಿನಂತೆ ಪ್ರಕರಣ ದಾಖಲಾಗಿರುತ್ತದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net