

ಪಟ್ನಾ: ಇತ್ತೀಚಿನ ದಿನಗಳಲ್ಲಿ ಮದುವೆಯಗಾಲು ನಿರಾಕರಿಸಿದರು ಎಂಬ ಕಾರಣಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆಗೈದ, ಆಕೆಯ ಮೇಲೆ ಆ್ಯಸಿಡ್ ಎರಚಿದ ಘಟನೆಗಳು ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗಿ ಸದ್ದು ಮಾಡುತ್ತಿವೆ. ಆದರೆ, ತನ್ನನ್ನು ಮದುವೆಯಾಗಲು ನಿರಾಕರಿಸಿದ ಎಂಬ ಕಾರಣಕ್ಕೆ ವೈದ್ಯರೊಬ್ಬರು ಪ್ರಿಯಕರನ ಜನನಾಂಗವನ್ನು ಕತ್ತರಿಸಿರುವ ಘಟನೆ ಬಿಹಾರದ ಸರನ್ ಜಿಲ್ಲೆಯಲ್ಲಿ ನಡೆದಿದೆ.
ಆಘಾತಕಾರಿ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗಾಯಾಳುವನ್ನು ವೇದ್ ಪ್ರಕಾಶ್ (30) ಎಂದು ಗುರುತಿಸಲಾಗಿದೆ. ಈತ ಸರನ್ ಜಿಲ್ಲೆಯ ಮಧುರಾನಗರದ ನಿವಾಸಿಯಾಗಿದ್ದು, 12ನೇ ವಾರ್ಡಿನ್ ಕೌನ್ಸಿಲರ್ ಎಂದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ವೈದ್ಯೆ ಅಭಿಲಾಷಾ (26)ಳನ್ನು ವಶಕ್ಕೆ ಪಡೆದಿದ್ದಾರೆ.
ವೈರಲ್ ಆಗಿರುವ ವಿಡಿಯೋ ನೋಡುವುದಾದರೆ ಕೌನ್ಸಿಲರ್ ವೇದ್ ಪ್ರಕಾಶ್ ನೋವಿನಿಂದ ನರಳುತ್ತಾ ಬೆಡ್ ಮೇಲೆ ನರಳಾಡುತ್ತಿದ್ದು, ವೈದ್ಯೆ ಅಭಿಲಾಷ ಜೋರಾಗಿ ಅಳುತ್ತಾ ಮದುವೆಗೆ ನಿರಾಕರಿಸಿದ್ದಕ್ಕಾಗಿ ನಾನು ಹೀಗೆ ಮಾಡಬೇಕಾಯಿತು ಎಂದು ಹೇಳುತ್ತಿರುವುದನ್ನು ನೋಡಬಹುದಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಸಂತ್ರಸ್ತ ವೇದ್ ಹಾಗೂ ಅಭಿಲಾಷಾ 12 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದರು. ಮದುವೆಯಾಗುವುದಾಗಿ ನಂಬಿಸಿ ದೇವ್ ಅಭಿಲಾಷಾಳೊಂದಿಗೆ ದೈಹಿಕ ಸಂಪರ್ಕವನ್ನು ಬೆಳೆಸಿ ಬಳಿಕ ಅಂತರ ಕಾಯ್ದುಕೊಂಡಿದ್ದ. ಮದುವೆಯಾಗಲಯ ಸತಾಯಿಸುತ್ತಿದ್ದ ವೇದ್ನ ನಡೆಯಿಂದ ಕೋಪಗೊಂಡ ಆಕೆ ಮನೆಗೆ ಕರೆಸಿ ಆತನ ಜನನಾಂಗವನ್ನೇ ಕತ್ತರಿಸಿದ್ದಾಳೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಗಾಯಾಳು ನೀಡುವ ಹೇಳಿಕೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.