‘ಸುರಕ್ಷತೆ ಇಲ್ಲ, ಕರ್ತವ್ಯ ನಿರ್ವಹಿಸಲ್ಲ’: ಮಧ್ಯರಾತ್ರಿ ವೈದ್ಯರ ಧರಣಿ ! ಪ್ರತಿಭಟನೆ ವೇಳೆ ಕಿಡಿಗೇಡಿಗಳ ದಾಳಿ

ಪಶ್ಚಿಮ ಬಂಗಾಳ: ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಯನ್ನು ಖಂಡಿಸಿ ರಾಜ್ಯದ ಮಹಿಳಾ ವೈದ್ಯರು ಮತ್ತು ಇತರರು ಬೃಹತ್ ಪ್ರತಿಭಟನೆ ಕೈಗೊಂಡಿದ್ದು, ಧರಣಿಯನ್ನು ಇಂದು ಕೂಡ ಮುಂದುವರೆಸಿದ್ದಾರೆ. ಸದ್ಯ ಪ್ರಕರಣವನ್ನು ಹೈಕೋರ್ಟ್​ ಸಿಬಿಐಗೆ ವಹಿಸಿದ್ದು, ತನಿಖೆ ಚುರುಕುಗೊಳಿಸುವಂತೆ ಆದೇಶಿಸಿದೆ. ಈ ಮಧ್ಯೆ ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ, ನಾವು ಕೆಲಸ ಮಾಡಲ್ಲ ಎಂದು ವೈದ್ಯರು ಧರಣಿ ನಡೆಸುತ್ತಿದ್ದು, ಸ್ವಾತಂತ್ರ್ಯ ದಿನಾಚರಣೆಯ ಮಧ್ಯರಾತ್ರಿಯೂ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಭಿನ್ನಮತ, ಕಾರ್ಯ-ಕಾರಣ ತಿಳಿಯುವ: ‘ಸಂಘ’ದ ಪ್ರಮುಖರೊಂದಿಗೆ ಬಿ.ವೈ. ವಿಜಯೇಂದ್ರ ಮಾತುಕತೆ

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಮಹಿಳೆಯರು ಇಂದು ಮಧ್ಯರಾತ್ರಿಯೇ ಆಸ್ಪತ್ರೆ ಎದುರು ಬೃಹತ್​ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿದ್ದಾರೆ. ದೆಹಲಿ ಏಮ್ಸ್​ ಗೇಟ್​ ನಂಬರ್ 2ರ ಮುಂದೆ ಜಮಾಯಿಸಿದ್ದ ಮಹಿಳೆಯರು, ಹೆಣ್ಣು ಮಕ್ಕಳಿಗೆ ಸುರಕ್ಷತೆ ಇಲ್ಲ, ನಾವು ಕೆಲಸ ಮಾಡಲ್ಲ ಎಂದು ಪಟ್ಟುಹಿಡಿದಿದ್ದಾರೆ.

ತಮ್ಮ ಸಹೋದ್ಯೋಗಿಯ ಮೇಲೆ ಅತ್ಯಾಚಾರ ಎಸಗಿದ್ದಲ್ಲದೇ ಆಕೆಯನ್ನು ಹತ್ಯೆಗೈದ ಆರೋಪಿಗೆ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಮಹಿಳಾ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ ದುಷ್ಕರ್ಮಿಗಳ ಗ್ಯಾಂಗ್​​​ವೊಂದು ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ತುರ್ತು ಚಿಕಿತ್ಸಾ ವಿಭಾಗವನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದೆ. ಕ್ಷಣಮಾತ್ರದಲ್ಲಿ ಧರಣಿ ಹಿಂಸಾಚಾರಕ್ಕೆ ತಿರುಗಿದ್ದು, ಪೊಲೀಸರು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ, ಲಾಠಿ ಪ್ರಹಾರದ ಮೂಲಕ ಗುಂಪುಗಳನ್ನು ಚುದುರಿಸಿದ್ದಾರೆ.

ಕಳೆದ 34 ದಿನದಿಂದ ಊಟ ಮಾಡಿಲ್ಲ! 1.2 ಕೋಟಿ ರೂ. ಸಾಲವಿದೆ, ಕೈಯಲ್ಲಿ ಕೆಲಸವಿಲ್ಲ: ಕಣ್ಣೀರಿಟ್ಟ ನಟ

Share This Article

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…

ನೀವಿದನ್ನು ನಿತ್ಯವೂ ಚಾಚೂ ತಪ್ಪದೇ ಅನುಸರಿಸಿದರೆ ನೀವು ಖಂಡಿತ ಶ್ರೀಮಂತರಾಗ್ತೀರಿ! Rich Person

ಇಂದು ಪ್ರತಿಯೊಬ್ಬರು ಶ್ರೀಮಂತರಾಗಲು ( Rich Person ) ಬಯಸುತ್ತಾರೆ. ತಾವು ದುಡಿದ ಹಣವನ್ನು ಸರಿಯಾದ…