ಪತಿ ಬ್ಯೂಟಿ ಪಾರ್ಲರ್​ಗೆ ಹೋಗಲು ಬಿಡಲಿಲ್ಲ ಎಂದು ಸಾವಿಗೆ ಶರಣಾದ ಹೆಂಡತಿ!

mng--crime
Published on

ನವದೆಹಲಿ: ಬ್ಯೂಟಿ ಪಾರ್ಲರ್​ಗೆ ಹೋಗಲು ಅವಕಾಶ ನೀಡದಿದ್ದಕ್ಕೆ ಅಸಮಾಧಾನಗೊಂಡ 34 ವರ್ಷದ ಈ ಮಹಿಳೆ, ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಪೊಲೀಸರು ಶುಕ್ರವಾರ (ಏ.28) ಮಾಹಿತಿ ನೀಡಿದ್ದಾರೆ.

ಗುರುವಾರ ಇಂದೋರ್​ ನಗರದ ಸ್ಕೀಮ್ ನಂಬರ್ 51 ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಸಬ್ ಇನ್ಸ್‌ಪೆಕ್ಟರ್ ಉಮಾಶಂಕರ್ ಯಾದವ್ ತಿಳಿಸಿದ್ದಾರೆ. ಆಕೆಯನ್ನು ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದಿರುವುದಾಗಿ ಆಕೆಯ ಪತಿ ಹೇಳಿದ್ದು, ಮಹಿಳೆ ಕೋಪದ ಭರದಲ್ಲಿ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net