ಮೈಸೂರು: ಯುವತಿಯೋರ್ವಳ ಮೇಲೆ ಯುವಕರಿಬ್ಬರು ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಘಟನೆ ಮೈಸೂರು ನಗರದಲ್ಲಿ ನಡೆದಿದೆ. ನಗರದ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ಧಾರೆ.
ಬಂಧಿತರನ್ನು ಮೈಸೂರಿನ ಹೂಟಗಳ್ಳಿಯ ಶ್ರೇಯಸ್ ಮತ್ತು ಸಕಲೇಶಪುರದ ಶಲಾಂಕ್ ಎಂದು ಗುರುತಿಸಲಾಗಿದೆ. ನವೆಂಬರ್ 03ರಂದು ಈ ಘಟನೆ ನಡೆದಿದೆ. ಯುವತಿ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ನಗರದ ಪಬ್ ಒಂದರಲ್ಲಿ ಆರೋಪಿಗಳು ಹಾಗೂ ಮಡಿಕೇರಿ ಮೂಲದ ಯುವತಿ ಭೇಟಿಯಾಗಿದ್ದಾರೆ. ಇದಾದ ಬಳಿಕ ಓರ್ವ ಆರೋಪಿ ಆಕೆಗೆ ಆಮಿಷವೊಡ್ಡಿ ಬೇರೊಂದು ಜಾಗಕ್ಕೆ ಕರೆದುಕೊಂಡು ಹೋಗಿದ್ದು, ಬಳಿಕ ಸ್ನೇಹಿತನನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರವೆಸಗಿದ್ದು, ಇದನ್ನು ತಮ್ಮ ಮೊಬೈಲ್ನಲ್ಲಿ ಚಿತ್ರೀಕರಿಸಿದ್ಧಾರೆ ಎಂದು ವರದಿಯಾಗಿದೆ.. ಘಟನೆ ಸಂಬಂಧ ಸಂತ್ರಸ್ತೆ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು ವಿಚಾರಣೆಗೆ ಒಳಪಡಿಸಿದ್ದು ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ಧಾರೆ.
ಈ ಹಿಂದೆಯೂ ನಡೆದಿತ್ತು
2021ರಲ್ಲಿ ಕಾಲೇಜು ಅವಧಿ ಮುಗಿದ ನಂತರ ಪಾರ್ಕ್ ವೊಂದರಲ್ಲಿ ಸ್ನೇಹಿತನೊಂದಿಗೆ ಕುಳಿತಿದ್ದ ಸಂತ್ರಸ್ತೆಯನ್ನು ಚಾಮುಂಡಿ ಬೆಟ್ಟದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಏಳು ಮಂದಿ ಕಿರಾತಕರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಅಲ್ಲದೇ ರೂ. 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟು ಆಕೆಯ ಸ್ನೇಹಿತನನ್ನು ಮನಸೋ ಇಚ್ಚೆ ಥಳಿಸಿದ್ದರು. ಈ ಪ್ರಕರಣ ರಾಷ್ಟ್ರವ್ಯಾಪಿ ಸದ್ದು ಮಾಡಿತ್ತು.
ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ತಮಿಳುನಾಡಿನಲ್ಲಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ್ದರು, ಆರೋಪಿಗಳ ಹಾಗೂ ಸಂಸತ್ರಸ್ತೆಯ ಹೇಳಿಕೆಯನ್ನು ಆಧರಿಸಿ ತನಿಖೆ ನಡೆಸಿದ್ದ ಪೊಲೀಸರು 1,499 ಪುಟಗಳ ಚಾರ್ಜ್ಶೀಟ್ಅನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಯತ್ನಾಳ್, ಜಾರಕಿಹೊಳಿ ಮಾತಿಗೆ ಯಾವುದೇ ಕಿಮ್ಮತ್ತಿಲ್ಲ, ಉಪಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ: BY Vijayendra