

ಗಂಗೊಳ್ಳಿ: ತ್ರಾಸಿ ಪೆಟ್ರೋಲ್ ಬಂಕ್ ಕಡೆಗೆ ರಸ್ತೆ ದಾಟಲು ರಾ.ಹೆ. 66ರಲ್ಲಿ ಬೈಂದೂರು ಕಡೆಯಿಂದ ಕುಂದಾಪುರ ಕಡೆಗೆ ಹೋಗುತ್ತಿದ್ದ ಕಾರು ಹೊಸಾಡು ಗ್ರಾಮದ ಗೌರಿ ಎಂಬುವರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.