

ಮುಂಡಗೋಡ: ಅತಿವೇಗ ಹಾಗೂ ನಿರ್ಲಕ್ಷ್ಯನದಿಂದ ಬಸ್ ಚಲಾಯಿಸುವ ವೇಳೆ ಬಸ್ ಹಿಂಬದಿ ಬಾಗಿಲ ಬಳಿಯ ಸೀಟ್ನಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಕೆಳಗೆ ಬಿದ್ದು ತೀವ್ರ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಗುರುವಾರ ನಡೆದಿದೆ.
ತಾಲೂಕಿನ ಗುಂಜಾವತಿ ಗ್ರಾಮದ ಮಾಬುಬಿ ರಹಿಮಾನಸಾಬ ಶೇಖ (41) ಮೃತಪಟ್ಟ ಮಹಿಳೆ.
ಗುರುವಾರ ಸಂಜೆ ಕೆಂದಲಗೇರಿಯಿಂದ ಉಗ್ನಿಕೇರಿ ಕಡೆಗೆ ಬರುತ್ತಿದ್ದ ಬಸ್ನಲ್ಲಿ ಪ್ರಯಾಣಿಸುತ್ತಿದ್ದಾಗ ಚಾಲಕ ಅಂಜನ ಶಂಕರಗೌಡ ಕರಿಯಪ್ಪಗೌಡ್ರ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿಕೊಂಡು ಬಂದ ಪರಿಣಾಮ ಬಸ್ನ ಹಿಂಬದಿ ಸಿಟ್ನಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದಳು. ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದು, ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.