Odisha River: ಮೊಸಳೆ ದಾಳಿಗೆ 45 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಒಡಿಶಾದ ಕೇಂದ್ರಪಾರ ಜಿಲ್ಲೆಯಲ್ಲಿ ಸೋಮವಾರ (ಜೂ.16) ನಡೆದಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.
ಭಿತರ್ಕನಿಕಾ ರಾಷ್ಟ್ರೀಯ ಉದ್ಯಾನವನದ ಬಳಿಯ ರಾಜನಗರ ಅರಣ್ಯ ವ್ಯಾಪ್ತಿಯ ತನ್ಲಾಡಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಇದನ್ನು ಓದಿ: ನೀವು ವಿಟಮಿನ್ ಬಿ 12 ಕೊರತೆಯಿಂದ ಬಳಲುತ್ತಿದ್ದೀರಾ? ತಪ್ಪದೇ ಇವುಗಳನ್ನು ನಿಮ್ಮ ಆಹಾರದಲ್ಲಿ ಸೇರಿಸಿ…Vitamin B12
ಖರಸ್ರೋಟ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಹಿಳೆಯನ್ನು ಮೊಸಳೆ ನೀರಿಗೆ ಎಳೆದೊಯ್ದಿದೆ ಎಂದು ಉದ್ಯಾನವನದ ಅರಣ್ಯ ಶ್ರೇಣಿ ಅಧಿಕಾರಿ ಚಿತ್ತರಂಜನ್ ಬ್ಯೂರಾ ಹೇಳಿದ್ದಾರೆ.
ಮೃತರ ಕುಟುಂಬಕ್ಕೆ ಪರಿಹಾರ ಮೊತ್ತವನ್ನು ನೀಡಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
ವೈದ್ಯಕೀಯ-ಕಾನೂನು ವಿಧಿವಿಧಾನಗಳು ಪೂರ್ಣಗೊಂಡ ನಂತರ ಅರಣ್ಯ ಇಲಾಖೆಯು ಮೃತಳ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರವನ್ನು ನೀಡುತ್ತದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)