ಸಿನಿಮಾ

ಕೇರಳ ಸ್ಟೋರಿ ನೋಡಿ ಪ್ರಿಯಕರನ ಮೇಲೆ FIR ದಾಖಲಿಸಿದ ಯುವತಿ!

ಇಂದೋರ್: ತನ್ನ ಪ್ರಿಯತಮೆಯ ಮೇಲೆ ಅತ್ಯಾಚಾರ ಎಸಗಿ ಧರ್ಮ ಪರಿವರ್ತನೆಗೆ ಒತ್ತಡ ಹೇರಿದ ಆರೋಪದ ಮೇಲೆ ಮಧ್ಯಪ್ರದೇಶದ ಇಂದೋರ್ ನಗರದಲ್ಲಿ 23 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ವಿಶೇಷವೆಂದರೆ, “ದಿ ಕೇರಳ ಸ್ಟೋರಿ” ನೋಡಿದ ನಂತರ ಪ್ರೇಯಸಿ ಹಾಗೂ ಈತನ ನಡುವೆ ವಾಗ್ವಾದ ಶುರುವಾಗಿತ್ತು. ಇದಾದ ನಂತರ ಮಹಿಳೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಲಪ್ರಯೋಗ ಅಥವಾ ವಂಚನೆಯ ಮೂಲಕ ಮತಾಂತರವನ್ನು ನಿಷೇಧಿಸುವ ಮಧ್ಯಪ್ರದೇಶ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ 2021 ಮತ್ತು ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಖಜ್ರಾನಾ ಪೊಲೀಸ್ ಠಾಣೆಯ ಉಸ್ತುವಾರಿ ದಿನೇಶ್ ವರ್ಮಾ ಸುದ್ದಿಗಾರರಿಗೆ ತಿಳಿಸಿದರು.

“ಮದುವೆಯ ನೆಪದಲ್ಲಿ ಪ್ರೀತಿಯ ಬಲೆಗೆ ಬಿದ್ದ ನಂತರ ದೂರುದಾರ ಯುವತಿ ಆರೋಪಿ ವ್ಯಕ್ತಿಯೊಂದಿಗೆ ವಾಸಿಸುತ್ತಿದ್ದಳು” ಎಂದು ಎಫ್ಐಆರ್ ಉಲ್ಲೇಖಿಸಿ ವರ್ಮಾ ಹೇಳಿದ್ದಾರೆ.

ಧರ್ಮವನ್ನು ಬದಲಾಯಿಸುವಂತೆ ಆ ವ್ಯಕ್ತಿ ತನ್ನ ಮೇಲೆ ಒತ್ತಡ ಹೇರುತ್ತಿದ್ದು ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಯುವತಿ ಆರೋಪಿಸಿದಳು. “ತಾನು ಮತ್ತು ಆ ವ್ಯಕ್ತಿ ಇತ್ತೀಚೆಗೆ ‘ದಿ ಕೇರಳ ಸ್ಟೋರಿ’ ನೋಡಲು ಹೋಗಿದ್ದೆವು ಎಂದು ಮಹಿಳೆ ಹೇಳಿದ್ದಾರೆ. ಚಲನಚಿತ್ರವನ್ನು ನೋಡಿದ ನಂತರ, ಇಬ್ಬರೂ ವಾದಿಸಿದ್ದು ಪ್ರಿಯಕರ ಅವಳ ಮೇಲೆ ಹಲ್ಲೆ ಮಾಡಿದ ನಂತರ ಅವಳನ್ನು ತೊರೆದನು. ಅದಾದ ಮೇಲೆ ಯುವತಿ ಮೇ 19 ರಂದು ಪೊಲೀಸರನ್ನು ಸಂಪರ್ಕಿಸಿ ಎಫ್ಐಆರ್ ದಾಖಲಿಸಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

12 ನೇ ತರಗತಿಯವರೆಗೆ ಶಿಕ್ಷಣ ಪಡೆದ ಆರೋಪಿ ನಿರುದ್ಯೋಗಿಯಾಗಿದ್ದು, ಸಂತ್ರಸ್ತ ಮಹಿಳೆ ಉನ್ನತ ಶಿಕ್ಷಣ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಕೋಚಿಂಗ್ ಇನ್ಸ್ಟಿಟ್ಯೂಟ್ನಲ್ಲಿ ಓದುತ್ತಿದ್ದಾಗ ಆ ವ್ಯಕ್ತಿಯನ್ನು ಭೇಟಿಯಾಗಿದ್ದೆ ಎಂದು ಯುವತಿ ಹೇಳಿದರು. “ಎಲ್ಲಾ ಆರೋಪಗಳನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ” ಎಂದು ವರ್ಮಾ ಹೇಳಿದ್ದಾರೆ. (ಏಜೆನ್ಸೀಸ್)

Latest Posts

ಲೈಫ್‌ಸ್ಟೈಲ್