More

    ಹೆಣ್ಣನ್ನು ನೋಡುವ ಮನಸ್ಥಿತಿ ಬದಲಾಗಿಲ್ಲ

    ಬೆಳಗಾವಿ: ಮಹಿಳೆ ಬದಲಾಗುತ್ತಿದ್ದೇನೆಂಬ ಮುಖವಾಡ ಕಳಚಿ ವಾಸ್ತವ ನೆಲೆಯಲ್ಲಿ ಬದುಕಬೇಕು. ಅಡುಗೆ ಕೋಣೆಯಿಂದ ಪೈಲೆಟ್‌ವರೆಗೆ ಜವಾಬ್ದಾರಿ ನಿರ್ವಹಿಸುತ್ತಿದ್ದರೂ ಇಂದಿಗೂ ಹೆಣ್ಣನ್ನು ನೋಡುವ ಸಮಾಜದ ಮನಸ್ಥಿತಿ ಬದಲಾಗಿಲ್ಲ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯೆ ಡಾ.ನೀತಾ ರಾವ್ ಹೇಳಿದ್ದಾರೆ.

    ನಗರದ ಸಂಗೊಳ್ಳಿ ರಾಯಣ್ಣ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ ಮತ್ತು ಮಹಿಳಾ ಸಬಲೀಕರಣ ಕೋಶ ಉದ್ಘಾಟಸಿ ಮಾತನಾಡಿದರು. ಹೆಣ್ಣು ಮಕ್ಕಳು ಪದವಿಯ ವ್ಯಾಸಂಗ ಅರ್ಧಕ್ಕೆ ಮೊಟಕುಗೊಳಿಸುವಂತೆ ನೋಡಿಕೊಳ್ಳಬೇಕು. ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್ ನಡೆಸಬೇಕು ಎಂದು ಸಲಹೆ ನೀಡಿದರು. ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನ್ಯಾಸಕಿ ಮಂಗಳಾ ಹುಗ್ಗಿ ಮಾತನಾಡಿ, ಶಿಕ್ಷಣ ಕೇವಲ ಜ್ಞಾನಾರ್ಜನೆ ಅಥವಾ ಪದವಿಗೆ ಮಾತ್ರ ಸೀಮಿತವಾಗದೆ, ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಬೇಕು. ಆ ನಿಟ್ಟಿನಲ್ಲಿ ಯೋಜನೆ ಅತ್ಯಗತ್ಯ ಎಂದರು.

    ಪ್ರಾಚಾರ್ಯ ಡಾ.ಎಂ.ಜಯಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ.ಶೋಭಾ ನಾಯಕ ಸೇರಿ ಮಹಾವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು. ಸಹಾಯಕ ಪ್ರಾಧ್ಯಾಪಕಿ ಯಾಸ್ಮೀನ್ ಬೇಗಂ ನದಾಫ್ ಸ್ವಾಗತಿಸಿದರು. ವಿದ್ಯಾರ್ಥಿನಿ ರಾಖಿ ಕೆಳಗಿನಮನಿ ಪ್ರಾರ್ಥಿಸಿದರು. ಡಾ.ಜ್ಯೋತಿ ಪಾಟೀಲ ನಿರೂಪಿಸಿದರು. ಉಪಪ್ರಾಚಾರ್ಯ ಅನಿಲ ರಾಮದುರ್ಗ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts