ಮಾಂಗಲ್ಯ ಕಟ್ಟಿಸಿಕೊಂಡಿದ್ದ ಕೊರಳಿಗೇ ಬಿತ್ತು ಉರುಳು; ಮದುವೆಯಾದ ಮೂರೇ ತಿಂಗಳಲ್ಲಿ ಬದುಕೇ ಮುಕ್ತಾಯ

Women (3)
Published on

ಬೆಂಗಳೂರು: ಮೂರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿಯೊಬ್ಬಳು ಇಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಸಾವಿಗೀಡಾಗಿದ್ದಾಳೆ. ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಈ ಪ್ರಕರಣ ನಡೆದಿದೆ.

ಕೋಲಾರ ಮೂಲದ ಪೃಥ್ವಿರಾಜ್ (30 ) ಎಂಬಾತನನ್ನು ಮದುವೆಯಾಗಿದ್ದ ಕೃಷ್ಣವೇಣಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪೃಥ್ವಿರಾಜ್​ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದಾನೆ. ಮೂರು ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು.

ಕೃಷ್ಣವೇಣಿಯನ್ನು ಪತಿಯೇ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಕುರಿತು ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಲಾರಂಭಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net