ಚಲಿಸುತ್ತಿದ್ದ ಆಟೋ ಮೇಲೆ ಬಿದ್ದ ಮರ; ಮಹಿಳೆಯ ಸಾವು, ಚಾಲಕನ ಸ್ಥಿತಿ ಚಿಂತಾಜನಕ

Auto 1
Published on

ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದು ಓರ್ವ ಮಹಿಳೆ ಸಾವಿಗೀಡಾಗಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ.
ಇಲ್ಲಿನ ಪೊಲೀಸ್ ಪರೇಡ್ ಮೈದಾನದ ಬಳಿ ಮಂಗಳವಾರ ಈ ಘಟನೆ ನಡೆದಿದೆ. ಸ್ಥಳೀಯ ಸಿದ್ದಾರೂಢ ಕಾಲನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟವರು. ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಆಟೋ ಚಾಲಕ ಸಚಿನ ರಾಠೋಡ್‌ಗೆ ಗಾಯಗಳಾಗಿವೆ.

ಮದಬಾವಿ ತಾಂಡಾದ ಆಟೋ ಚಾಲಕನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಆಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಘಟನೆಯಿಂದ ಕೆಲ ಕಾಲ ಸಂಚಾರ ಬಂದ್ ಆಗಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಕಲ್ಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net