'ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿಯಾಗಲಿಲ್ಲ..': ಮೋಹನಕುಮಾರಿ ಇನ್ನಿಲ್ಲ...

suicide
Published on

ಮೈಸೂರು: ಕರೊನಾ-ಲಾಕ್​ಡೌನ್​ನಿಂದ ಉಂಟಾದ ಆರ್ಥಿಕ ಸಂಕಷ್ಟದ ಕಾರಣಕ್ಕಾಗಿ ವಿವಾಹಿತ ಮಹಿಳೆಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ಎನ್​.ಆರ್​. ಮೊಹಲ್ಲಾ ಟ್ಯಾಂಕ್​ ರೋಡ್​ನಲ್ಲಿ ಈ ಘಟನೆ ನಡೆದಿದೆ.

ಮೂವತ್ತೆರಡು ವರ್ಷದ ಮೋಹನಕುಮಾರಿ ಆತ್ಮಹತ್ಯೆ ಮಾಡಿಕೊಂಡವರು. ಈಕೆ ಚಾರ್ಟರ್ಡ್​ ಅಕೌಂಟೆಂಟ್ ಒಬ್ಬರ ಬಳಿ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದು. ಇವರು ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನು ಪ್ರೀತಿಸಿ, 2013ರಲ್ಲಿ ಮದುವೆ ಆಗಿ ಚೆನ್ನಾಗಿಯೇ ಜೀವನ ನಡೆಸುತ್ತಿದ್ದರು.

ಸಿಎ ಬಳಿ ಸಹಾಯಕಿಯಾಗಿದ್ದ ಇವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಈ ನಡುವೆ ಕರೊನಾ ಲಾಕ್​ಡೌನ್​ನಿಂದಾಗಿ ಪತಿಯ ಆದಾಯಕ್ಕೂ ಹೊಡೆತ ಬಿದ್ದಿತ್ತು. ಪರಿಣಾಮವಾಗಿ ಈ ದಂಪತಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಇದರಿಂದ ಮನನೊಂದಿದ್ದ ಈಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮೋಹನಕುಮಾರಿ ಸಾಯಲಿಕ್ಕೆ ಕಾರಣವನ್ನೂ ತಿಳಿಸಿದ್ದಾರೆ. ಈ ಕುರಿತಂತೆ ಡೆತ್​​ನೋಟ್ ಬರೆದಿಟ್ಟಿದ್ದರು. ತಂದೆಗೆ ಒಳ್ಳೆಯ ಮಗಳಾಗಲಿಲ್ಲ, ಗಂಡನಿಗೆ ತಕ್ಕ ಹೆಂಡತಿ ಆಗಲಿಲ್ಲ ಎಂದು ಡೆತ್​ನೋಟ್​​ನಲ್ಲಿ ಬರೆದ ಮೋಹನಕುಮಾರಿ ಉರುಳಿಗೆ ಕೊರಳೊಡ್ಡಿ ಆತ್ಮಹತ್ಯೆ ಮಾಡಿಕೊಂಡರು. ಎನ್.ಆರ್. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net