More

    ಭೀಕರ ಅಪಘಾತ; ಟಿಪ್ಪರ್ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು, ಬೈಕ್ ಸವಾರನ ಕಾಲು ಮುರಿತ..

    ನೆಲಮಂಗಲ: ರಾಜ್ಯದಲ್ಲಿ ಭೀಕರ ಅಪಘಾತಗಳ ಪ್ರಮಾಣ ಹೆಚ್ಚಾಗುತ್ತಿದ್ದು, ಭಾರಿ ಸಾವು-ನೋವುಗಳು ಸಂಭವಿಸುತ್ತಿದ್ದರೂ ಚಾಲಕರು-ಸವಾರರು ಎಚ್ಚೆತ್ತ ಹಾಗೆ ಕಾಣಿಸುತ್ತಿಲ್ಲ. ಇಂದು ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕಾರೇಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಇದರಲ್ಲಿ ನೆಲಮಂಗಲದ ಜ್ಯೋತಿನಗರದ ಭಾಗ್ಯಮ್ಮ (43) ಸಾವಿಗೀಡಾಗಿದ್ದಾರೆ. ಇನ್ನೊಬ್ಬ ಗಿರೀಶ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.

    ಗಿರೀಶ್ ಜತೆ ಭಾಗ್ಯಮ್ಮ ಬೈಕ್​ನಲ್ಲಿ ಹೋಗುತ್ತಿದ್ದಾಗ ಬೈಕ್​ ಮತ್ತು ಟಿಪ್ಪರ್ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಭಾಗ್ಯಮ್ಮ ಟಿಪ್ಪರ್​ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಿರೀಶ್ ಕಾಲು ಮುರಿದುಹೋಗಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತವಾಗುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕೋವಿಡ್​ ಲಸಿಕೆ ಹಾಕಿಸಿಕೊಳ್ಳುವಂತೆ ಯಾರಿಗೂ ಒತ್ತಾಯಿಸುವಂತಿಲ್ಲ: ಸುಪ್ರೀಂ ಕೋರ್ಟ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts