ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು 21 ವರ್ಷದ ವಿವಾಹಿತೆ, ಆಕೆಯ ಪ್ರಿಯಕರ ಆತ್ಮಹತ್ಯೆ!

ಜೈಪುರ: ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರ ಬಂದೂಕಿನಿಂದ ಶೂಟ್‌ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೈಪುರದ ಬಾರ್ಮರ್‌ನಲ್ಲಿ ನಡೆದಿದೆ.

ಅಂಜು ಸುಥರ್‌ ಮತ್ತು ಶಾಮ್ಕರ್‌ ಚೌಧರಿ ಮೃತರು. ಇಬ್ಬರಿಗೂ 21 ವರ್ಷ ವಯಸ್ಸಾಗಿತ್ತು. ಇಬ್ಬರು ಪರಸ್ಪರ ಪ್ರೇಮಿಸುತ್ತಿದ್ದರು. ಆದರೆ, ಕೆಲ ದಿನಗಳ ಹಿಂದಷ್ಟೇ ಯುವತಿಗೆ ಬೇರೊಬ್ಬ ಯುವಕನ ಜತೆಗೆ ಮದುವೆಯಾಗಿತ್ತು. ಇದರಿಂದಾಗಿ ನೊಂದು ಇಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲವ್‌ ಫೇಲ್‌ ಆದ ಹಿನ್ನೆಲೆಯಲ್ಲಿ ಮನನೊಂದು ಇಬ್ಬರು ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಎರಡು ಬಂದೂಕುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬಾರ್ಮಲ್‌ ಎಸ್‌ಪಿ ರಾಶಿ ದೊಗ್ರಾ ತಿಳಿಸಿದ್ದಾರೆ.

ಅವರಿಬ್ಬರ ಮೊಬೈಲ್‌ನಲ್ಲಿರುವ ಆಡಿಯೋ ಕ್ಲಿಪ್‌ನಲ್ಲಿ ಲವ್‌ ಫೇಲ್‌ ಆಗಿದ್ದಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. (ಏಜೆನ್ಸೀಸ್)