ಕತ್ತಿಯಿಂದ ಕುತ್ತಿಗೆ ಕಡಿದು ಅತ್ತಿಗೆಯ ಕೊಲೆ; ಆರೋಪಿ ಮೈದುನ ಪರಾರಿ..

crime
Published on

ಹುಬ್ಬಳ್ಳಿ: ಅತ್ತಿಗೆಯ ಕುತ್ತಿಗೆಗೆ ಕತ್ತಿಯಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಲ್ಲದೆ, ಆರೋಪಿ ಮೈದುನ ಪರಾರಿಯಾಗಿ ತಲೆಮರೆಸಿಕೊಂಡಿರುವ ಪ್ರಕರಣ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಯರಿನಾರಾಯಣಪುರ ಗ್ರಾಮದ ನಿವಾಸಿ ಸುನಂದಾ ಮೆಣಸಿನಕಾಯಿ (40) ಕೊಲೆಗೀಡಾದ ಮಹಿಳೆ. ಈಕೆಯನ್ನು ಮೈದುನನೇ ಕೊಲೆ ಮಾಡಿದ್ದಾನೆ. ಮನೆಯಲ್ಲಿ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ.

ಕತ್ತಿಯಿಂದ ಕುತ್ತಿಗೆ ಮೇಲೆ ಹಲ್ಲೆ ಮಾಡಿದ ಪರಿಣಾಮವಾಗಿ ಕತ್ತು ಕತ್ತರಿಸಿ ಹೋಗಿ ಗಂಭೀರ ಗಾಯವಾಗಿದೆ. ಹಲ್ಲೆಯ ತೀವ್ರತೆಗೆ ಸುನಂದಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಕುಂದಗೋಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net