More

  ಅಡ್ರೆಸ್ ಕೇಳುವ ನೆಪದಲ್ಲಿ ಮಹಿಳೆಯ ಕೊರಳಲ್ಲಿದ್ದ ಚಿನ್ನದ ಸರ ದೋಚಿದ ಅಪರಿಚಿತ

  ರಾಣೆಬೆನ್ನೂರ: ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಸ್ ಆಗುತ್ತಿದ್ದ ಮಹಿಳೆಗೆ ವಿಳಾಸ ಕೇಳುವ ನೆಪದಲ್ಲಿ ನಿಲ್ಲಿಸಿದ ಅಪರಿಚಿತ ವ್ಯಕ್ತಿ ಆಕೆಯ ಕೊರಳಿದ್ದ 1.30 ಲಕ್ಷ ರೂ. ಮೌಲ್ಯದ 20 ಗ್ರಾಂ ತೂಕದ ಚಿನ್ನದ ಸರ ದೋಚಿದ ಘಟನೆ ಇಲ್ಲಿಯ ವಾಗೀಶ ನಗರದಲ್ಲಿ ಗುರುವಾರ ನಡೆದಿದೆ.
  ಸರೋಚನಾ ದ್ಯಾಮನಗೌಡ ತೆಂಬದ ಎಂಬುವರ ಚಿನ್ನದ ಸರ ದೋಚಿರುವುದು.
  ಇವರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ತೆರಳುತ್ತಿದ್ದ ಸಮಯದಲ್ಲಿ ಯಾರೋ ಅಪರಿಚಿತ ವ್ಯಕ್ತಿ ಇವರನ್ನು ತಡೆದು ವಿಳಾಸ ಕೇಳುವ ನೆಪದಲ್ಲಿ ಕೊರಳಲಿದ್ದ ಚಿನ್ನದ ಸರವನ್ನು ದೋಚಿಕೊಂಡು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts