More

  VIDEO| ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಪ್ರೇಮಿಗಳಿಗೆ ಖಡಕ್​ ವಾರ್ನಿಂಗ್​ ನೀಡಿದ ಮಹಿಳೆ

  ನವದೆಹಲಿ: ಇತ್ತೀಚಿನ ದಿನಗಳಲ್ಲಿ ಒಂದಿಲ್ಲೊಂದು ವಿಚಾರಕ್ಕೆ ದೆಹಲಿ ಮೆಟ್ರೋ ದೇಶದ ಜನರ ಗಮನ ಸೆಳೆಯುತ್ತಿದ್ದು, ಇದೀಗ public display of affection ವಿಚಾರವಾಗಿ ಸದ್ದು ಮಾಡುತ್ತಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

  ವೈರಲ್​ ಆಗಿರುವ ವಿಡಿಯೋದಲ್ಲಿ ಮಹಿಳೆಯೊಬ್ಬರು ಪ್ರೇಮಿಗಳನ್ನು ತೀವ್ರ ತರಾಟೆ ತೆಗೆದುಕೊಂಡಿರುವುದು ಕಂಡು ಬರುತ್ತದೆ. ಇದೇನಿದ್ದರೂ ಮೆಟ್ರೋದ ಹೊರಗಿರಲಿ ಎಂದು ಎಚ್ಚರಿಸುತ್ತಿರುವುದು ಕಂಡು ಬರುತ್ತದೆ.

  ಇದನ್ನೂ ಓದಿ: ಭಾರತದಲ್ಲಿ ಅಲ್ಪಸಂಖ್ಯಾತರನ್ನು ಹತ್ತಿಕ್ಕುತ್ತಿರುವುದು ನಾಚಿಕೆಗೇಡಿನ ಸಂಗತಿ: ರಾಹುಲ್​ ಗಾಂಧಿ

  ಮಹಿಳೆಯೂ ಪ್ರೇಮಿಗಳಿಬ್ಬರು ಒಬ್ಬರ ಕೈ ಹಿಡಿದು ಅಭ್ಯವಾಗಿ ವರ್ತಿಸುತ್ತಿದ್ದರು ಎಂದು ಆರೋಪಿಸಿದ್ದಾರೆ. ಇದು ಸಾರ್ವಜನಿಕ ಸ್ಥಳವಾಗಿದ್ದು, ನಿಮ್ಮ ಪ್ರೀತಿ-ಪ್ರೇಮದ ಪ್ರದರ್ಶನ ಏನಿದ್ದರೂ ಮೆಟ್ರೋದಿಂದ ಹೊರಗಿರಲಿ. ಜನನಿಬಿಡ ಪ್ರದೇಶದಲ್ಲಿ ಈ ರೀತಿ ನಡೆದುಕೊಳ್ಳುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ ಎಂದು ಪ್ರೇಮಿಗಳಿಗೆ ಮಹಿಳೆ ಛೀಮಾರಿ ಹಾಕಿದ್ದಾರೆ.

  ಇತ್ತ ಪ್ರೇಮಿಗಳಿಗೆ ಛೀಮಾರಿ ಹಾಕುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಮಹಿಳೆ ನಡೆಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಕೆಲವರು ಸಾರ್ವಜನಿಕ ರ್ಸತಳಗಳಲ್ಲಿ ಈ ರೀತಿ ಮಾಡುವುದು ತಪ್ಪು ಎಂದಿದ್ದಾರೆ. ಪ್ರೇಮಿಗಳು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುವುದು ತಪ್ಪಾ. ಈ ರೀತಿ ಮಾತನಾಡುವುದರಿಂದ ಏನು ಪ್ರಯೋಜನವಿಲ್ಲ ಎಂದು ಕೆಲವರು ಮಹಿಳೆಯ ನಡೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts