

ಕುಂದಾಪುರ: ಲಾರಿ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಟನೆ ಕುಂದಾಪುರದ ಸಂತೆ ವಾರ್ಕೆಟ್ ಬಳಿ ರಾ.ಹೆ. 66ರಲ್ಲಿ ನಡೆದಿದೆ. ಮಹಿಳೆ ರಸ್ತೆ ದಾಟಿ ವಿಭಜಕದ ಅಂಚಿಗೆ ಬರುತ್ತಿದ್ದಂತೆ ುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ಅವರನ್ನು ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಹಾಗೂ ಅಲ್ಲಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.