ಸಿನಿಮಾ

ರಾತ್ರೋ ರಾತ್ರಿ ಬೈಕ್‌ಗೆ ಬೆಂಕಿ ಹಚ್ಚಿದ ಮಹಿಳೆ: ರೆಡ್​ ಹ್ಯಾಂಡ್​ ಆಗಿ ಹಿಡಿದ ಸ್ಥಳೀಯರು

ದೆಹಲಿ: ನಿಲ್ಲಿಸಿದ್ದ ಬೈಕ್‌ನಿಂದ ಮಹಿಳೆಯೊಬ್ಬರು ಪೆಟ್ರೋಲ್ ತೆಗೆದು, ಬೈಕ್‌ಗೆ ಬೆಂಕಿ ಹಚ್ಚುತ್ತಿರುವ ವಿಚಿತ್ರ ಘಟನೆಯೊಂದು ದೆಹಲಿಯ ಆಗ್ನೇಯ ಜಿಲ್ಲೆಯ ಜೈತ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ವಾನ; 31ನೇ ವರ್ಷಕ್ಕೆ ಕಾಲಿಟ್ಟ ಬೋಬಿ

ಮಹಿಳೆಯ ಈ ಕೃತ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಶುಕ್ರವಾರ ಬೆಳಗಿನ ಜಾವ 2:42ರ ಸುಮಾರಿಗೆ ಈ ಘಟನೆ ನಡೆದಿದೆ. ಮಹಿಳೆಯ ಹಿಂದಿನ ಉದ್ದೇಶವೇನು ಎಂಬುದು ತಿಳಿದು ಬಂದಿಲ್ಲವಾದರೂ, ಸದ್ಯ ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಈ ಕುರಿತು ಮಾತನಾಡಿರುವ ಪೊಲೀಸರು, ನಿನ್ನೆ ರಾತ್ರಿ ದೆಹಲಿಯ ಆಗ್ನೇಯ ಜಿಲ್ಲೆಯ ಜೈತ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಹಿಳೆಯೊಬ್ಬರು ಬೈಕ್‌ನಿಂದ ಪೆಟ್ರೋಲ್ ತೆಗೆದು ಬೆಂಕಿ ಹಚ್ಚುತ್ತಿರುವುದು ಪತ್ತೆಯಾಗಿದೆ. ನಂತರ ಆಕೆ ಮತ್ತೊಂದು ಬೈಕ್‌ಗೆ ಬೆಂಕಿ ಹಚ್ಚಲು ಯತ್ನಿಸುತ್ತಿದ್ದಾಗ ಸ್ಥಳೀಯರು ಆಕೆಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)

 

 

Latest Posts

ಲೈಫ್‌ಸ್ಟೈಲ್