ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ! ವಿಡಿಯೋ ವೈರಲ್​

ಚಂಡೀಗಢ: ಪ್ರವಾಹದ ಸಮಸ್ಯೆಯಿಂದ ಆಕ್ರೋಶಗೊಂಡ ಮಹಿಳೆಯೊಬ್ಬಳು ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಬಂದಿದ್ದ ಜನನಾಯಕ್​ ಜನತಾ ಪಾರ್ಟಿಯ ಶಾಸಕ ಈಶ್ವರ್​ ಸಿಂಗ್ ಅವರ ಕಪಾಳಕ್ಕೆ ಬಾರಿಸಿರುವ ಘಟನೆ ಹರಿಯಾಣದ ಘುಲಾ ಎಂಬಲ್ಲಿ ಬುಧವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ಉಕ್ಕಿ ಹರಿಯುತ್ತಿರುವ ಘಾಗ್ಗರ್​ ನದಿಯಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ಶಾಸಕರು ವೀಕ್ಷಿಸಲು ಬಂದಿದ್ದ ಸಂದರ್ಭದಲ್ಲಿ ಅವರೊಂದಿಗೆ ವಾಗ್ವಾದಕ್ಕೆ ಇಳಿದ ಮಹಿಳೆ, ನೀನು ಈಗ ಬಂದ್ರಿ? ಎಂದು ಕಪಾಳಕ್ಕೆ ಬಾರಿಸಿದ ದೃಶ್ಯ ವಿಡಿಯೋದಲ್ಲಿದೆ. … Continue reading ಪ್ರವಾಹ ಪರಿಸ್ಥಿತಿ ಪರಿಶೀಲಿಸಲು ಬಂದ ಶಾಸಕನಿಗೆ ಕಪಾಳಮೋಕ್ಷ ಮಾಡಿದ ಮಹಿಳೆ! ವಿಡಿಯೋ ವೈರಲ್​