More

    ರಾಖಿ ಕಟ್ಟಿ ದೊಡ್ಡ ಮೊತ್ತ ಕೇಳಿದ ಸಹೋದರಿಯರು; ಕೊಡದಿದ್ದಕ್ಕೆ ಅತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ

    ನವದೆಹಲಿ: ಸಹೋದರ-ಸಹೋದರಿ ಸಂಬಂಧವನ್ನು ಬೆಸೆಯುವ ಬಾಂಧವ್ಯದ ಹಬ್ಬ ರಕ್ಷಾ ಬಂಧನ. ಸಹೋದರ ಮತ್ತು ಸಹೋದರಿ ನಡುವಿನ ಪ್ರೀತಿ ಹಾಗೂ ನೆನಪುಗಳು ಅಚ್ಚಳಿಯದೆ ಉಳಿಯಲು ಪ್ರತಿ ವರ್ಷ ರಕ್ಷಾ ಬಂಧನವನ್ನು ಆಚರಿಸಲಾಗುತ್ತದೆ.

    ರಕ್ಷಾ ಬಂಧನದ ದಿನದಂದು ರಾಖಿ ಕಟ್ಟಿದ ನಂತರ ಸಹೋದರ ಸಹೋದರಿಗೆ ಉಡುಗೊರೆಗಳನ್ನು ನೀಡುವುದು ಸಾಮಾನ್ಯ. ಆದರೆ, ಘಟನೆಯೊಂದರಲ್ಲಿ ಉಡುಗೊರೆ ನೀಡಲಿಲ್ಲ ಎಂಬ ಕಾರಣಕ್ಕೆ ಮಹಿಳೆಯರಿಬ್ಬರು ಸಹೋದರನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ.

    ದೆಹಲಿಯ ಮೈದೀನ್​ ಗರ್ಹಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ. ಪ್ರಕರಣ ಸಂಬಂಧ ಆರೋಪಿಗಳಿಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಏಕಕಾಲದಲ್ಲಿ ಒಂದು ಸಾವಿರಕ್ಕೂ ಹೆಚ್ಚು ಹಂದಿಗಳ ಹತ್ಯೆ; ಈ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ

    ಪ್ರಕರಣದ ಹಿನ್ನಲೆ

    ವೃತ್ತಿಯಲ್ಲಿ ನರ್ಸ್​ ಆಗಿ ಕೆಲಸ ಮಾಡುತ್ತಿರುವ ಮಹಿಳೆ ತನ್ನ ಪತಿಯೊಂದಿಗೆ ದೆಹಲಿಯ ಮೈದೀನ್​ ಗರ್ಹಿ ಪ್ರದೇಶದಲ್ಲಿ ವಾಸಿಸುತ್ತಿದ್ದಳು. ಆಗಸ್ಟ್​ 31ರಂದು ರಕ್ಷಾ ಬಂಧನದ ಪ್ರಯುಕ್ತ ಪತಿಯ ಸಹೋದರಿಯರಿಬ್ಬರು ರಾಖಿ ಕಟ್ಟಲು ಬಂದಿದ್ದಾರೆ. ಸಹೋದರನಿಗೆ ರಾಖಿ ಕಟ್ಟಿದ್ದ ನಂತರ ಸಹೋದರಿಯರಿಬ್ಬರು ತಲಾ 21 ಸಾವಿರ ರೂಪಾಯಿ ಹಣ ನೀಡುವಂತೆ ಪಟ್ಟು ಹಿಡಿದಿದ್ದಾರೆ.

    ಇದಕ್ಕೆ ಆಕ್ಷೇಪಿಸಿದ ದಂಪತಿಗಳು ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರಿಂದ ಸಿಟ್ಟಿಗೆದ್ದ ಇಬ್ಬರು ಮಹಿಳೆಯರು ಸಹೋದರನ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಮಹಿಳೆಯ ಸ್ಥಿತಿ ಚಿಂತಾಜನಕವಾಗಿದ್ದು, ಆಕೆಯನ್ನು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts