More

    ರೈಲ್ವೆ ನಿಲ್ದಾಣದಲ್ಲಿ ಕುಳಿತಿದ್ದ ಯುವತಿಯನ್ನು ಎಳೆದೊಯ್ದು ಗ್ಯಾಂಗ್​ರೇಪ್​ ಮಾಡಿದ ಕಾಮುಕರು!

    ನವದೆಹಲಿ: ಅಪ್ಪ ಅಮ್ಮನ ಜತೆ ಜಗಳವಾಡಿಕೊಂಡು ಸಿಟ್ಟಿನಿಂದ ರೈಲ್ವೆ ನಿಲ್ದಾಣಕ್ಕೆ ಬಂದು ಕುಳಿತಿದ್ದ ಯುವತಿಯನ್ನು ರೈಲ್ವೆ ನಿಲ್ದಾಣದಿಂದ ಎಳೆದೊಯ್ದು ಗ್ಯಾಂಗ್​ ರೇಪ್​ ಮಾಡಿರುವ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
    22 ವರ್ಷದ ಯುವತಿ ಗುರುವಾರ ತನ್ನ ಕುಟುಂಬದೊಂದಿಗೆ ಜಗಳವಾಡಿದ್ದು, ಹತ್ತಿರದ ಶಕುರ್​ ಬಸ್ತಿ ರೈಲ್ವೆ ನಿಲ್ದಾಣಕ್ಕೆ ಬಂದು ಕುಳಿತಿದ್ದಾಳೆ. ಅಲ್ಲಿದ್ದ ಮೂವರು ಯುವಕರು ಆಕೆಯನ್ನು ಗಮನಿಸಿದ್ದು, ಆಕೆಯ ಬಳಿ ಹೋಗಿದ್ದಾರೆ.

    ಇದನ್ನೂ ಓದಿ: ಬೆಳಿಗ್ಗೆ ಅಂತ್ಯಸಂಸ್ಕಾರ ಮಾಡಿದರು; ಸತ್ತವ ರಾತ್ರಿಯೆನ್ನುವಷ್ಟರಲ್ಲಿ ಎದ್ದು ಬಂದ! ಆತ ಬದುಕಿದ್ದು ಹೇಗೆ ಗೊತ್ತಾ?

    ಆಕೆಯೊಂದಿಗೆ ಅಸಭ್ಯವಾಗಿ ವರ್ತಿಸಲಾರಂಭಿಸಿದ್ದಾರೆ. ಯುವತಿ ಆರೋಪಿಗಳಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಹಿನ್ನೆಲೆಯಲ್ಲಿ ಅಕೆಯನ್ನು ಅಲ್ಲಿಂದ ಎಳೆದೊಯ್ಯಲಾಗಿದೆ. ಅಲ್ಲೇ ಹತ್ತಿರದ ಸ್ಥಳಕ್ಕೆ ಎಳೆದೊಯ್ದು ಆಕೆಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ, ಮತ್ತೆ ತೊಂದರೆ ನೀಡುವುದಾಗಿ ಬೆದರಿಸಿದ ಆರೋಪಿಗಳು ಅಲ್ಲಿಂದ ಕಾಲ್ಕಿತ್ತಿದ್ದಾರೆ.

    ಇದನ್ನೂ ಓದಿ: ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪಿಸಿ ; ವಿಶ್ವ ಕುಂಚಿಟಿಗರ ಪರಿಷತ್ ಕಾರ್ಯಕ್ರಮದಲ್ಲಿ ಒತ್ತಾಯ ; ಕೇಂದ್ರದ ಒಬಿಸಿ ಪಟ್ಟಿಗೂ ಸೇರಿಸಿ

    ಸ್ವಲ್ಪ ಸಮಯದ ನಂತರ ಮನೆಗೆ ಮರಳಿದ ಯುವತಿ ನಡೆದ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿದ್ದಾಳೆ. ಈ ವಿಚಾರವಾಗಿ ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳ ಹುಡುಕಾಟಕ್ಕೆ ವಿಶೇಷ ತಂಡ ರಚಿಸಲಾಗಿದೆ. ಯುವತಿಯ ವೈದ್ಯಕೀಯ ವರದಿ ಬಂದ ನಂತರ ತನಿಖೆ ತೀವ್ರಗೊಳಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. (ಏಜೆನ್ಸೀಸ್​)

    ಇನ್​ಸ್ಟಾಗ್ರಾಂ ಸ್ಟಾರ್​ಗೆ 10 ವರ್ಷ ಜೈಲು! ವಿಚಿತ್ರವಾಗಿ ಕಾಣಲು ಹೋಗಿ ಜೈಲು ಸೇರಿದ ಯುವತಿ

    ಮದುವೆಗೆ ಮೂರು ದಿನವಿದ್ದಾಗ ಮರ್ಮಾಂಗವೇ ಕಟ್! 1 ಲಕ್ಷಕ್ಕಾಗಿ ಜೀವನವನ್ನೇ ಹಾಳು ಮಾಡಿಕೊಂಡ ಯುವಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts