More

    ಮಹಿಳೆಯರ ವಿಶೇಷ ದಿನ, ಬನ್ನಿ ಸಂಭ್ರಮಿಸೋಣ

    ಬೆಂಗಳೂರು: ತಾಯಿ, ಪತ್ನಿ, ಪುತ್ರಿ ಹೀಗೆ ಹಲವು ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಲೇ ಮಂಗಳನ ಅಂಗಳದವರೆಗೂ ಸಾಧನೆಯಲ್ಲಿ ಭಾಗಿಯಾಗು ತ್ತಿರುವ ಮಹಿಳೆಗಾಗಿ ಸಂಭ್ರಮಿಸುವ ‘ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ’ ಮತ್ತೆ ಬಂದಿದೆ. ಮಾ.8ರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ಕಳೆದ ವರ್ಷದಂತೆ ಈ ವರ್ಷವೂ ವಿಜಯವಾಣಿ ಹಾಗೂ ದಿಗ್ವಿಜಯ 24X7 ನ್ಯೂಸ್ ದೊಡ್ಡಮಟ್ಟದಲ್ಲಿ ಮಹಿಳಾ ದಿನಾಚರಣೆ ಆಯೋಜಿಸುತ್ತಿದೆ.

    ಮಾ.8ರ ಭಾನುವಾರ ಜ್ಞಾನಜ್ಯೋತಿ ಸಭಾಂಗಣದಲ್ಲಿ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸಮೂಹ ಸಂವಹನ ವಿಭಾಗದ ಸಹಯೋಗವಿದೆ. 2019ರಲ್ಲಿ ಏರ್ಪಡಿಸಿದ್ದ ವಾಕಥಾನ್​ನಲ್ಲಿ 7500ಕ್ಕೂ ಹೆಚ್ಚು ಕಾಲೇಜು ವಿದ್ಯಾರ್ಥಿನಿಯರು, ವಿವಿಧ ಸಂಘ-ಸಂಸ್ಥೆಗಳ, ಖಾಸಗಿ ಕಂಪನಿಗಳ ಮಹಿಳೆಯರು ಭಾಗವಹಿಸಿದ್ದರು. ಈ ವರ್ಷ 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಳ್ಳುವ ನಿರೀಕ್ಷೆ ಇದೆ.

    ವಾಕಥಾನ್ ಬಳಿಕ ಸಭಾ ಕಾರ್ಯಕ್ರಮ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜನೆ ಮಾಡಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐವರು ಮಹಿಳೆಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಬೆಂಗಳೂರಿನ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಕನ್ನಡಪರ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಐಟಿ-ಬಿಟಿ ಕಂಪನಿಗಳ ಮಹಿಳಾ ಉದ್ಯೋಗಿಗಳು ಭಾಗವಹಿಸಲಿದ್ದಾರೆ.

    ಸಾಂಸ್ಕೃತಿಕ ಕಾರ್ಯಕ್ರಮ: 2019ರ ಮಹಿಳಾ ದಿನಾಚರಣೆಯಲ್ಲಿ ಕೆಲ ಸಂಘ-ಸಂಸ್ಥೆಗಳು ಭಾಗವಹಿಸಿ ನೃತ್ಯ, ಬ್ಯಾಂಡ್ ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದವು. ಈ ವರ್ಷ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳ ತಂಡಗಳು ಸಾಂಪ್ರದಾಯಿಕ ಉಡುಗೆ ತೊಟ್ಟು ಫ್ಯಾಶನ್ ಶೋ, ಜಾನಪದ ನೃತ್ಯ, ಹಾಡು, ಸಂಗೀತ ನಡೆಸಿಕೊಡಲಿದ್ದಾರೆ.

    ಆಸಕ್ತರು ಹೆಸರು ನೋಂದಾಯಿಸಿ: ಸಾರ್ವಜನಿಕರು, ಕಾಲೇಜುಗಳ ವಿದ್ಯಾರ್ಥಿಗಳು, ಸಂಘ-ಸಂಸ್ಥೆಗಳ ಸದಸ್ಯರು, ಖಾಸಗಿ ಸಂಸ್ಥೆಗಳ ಉದ್ಯೋಗಿಗಳು ವಾಕಥಾನ್​ನಲ್ಲಿ ಭಾಗವಹಿಸಬಹುದಾಗಿದೆ. ಆಸಕ್ತರು ಮೊ.ಸಂ.88844 32666ಕ್ಕೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ನೋಂದಣಿ ಉಚಿತ.

    ಬೃಹತ್ ವಾಕಥಾನ್

    ಭಾನುವಾರ ಬೆಳಗ್ಗೆ 7 ಗಂಟೆಗೆ ವಿಧಾನಸೌಧ ಮುಂಭಾಗದಿಂದ ವಾಕಥಾನ್ ಆರಂಭ ಆಗಲಿದೆ. ಕೆ.ಆರ್.ಸರ್ಕಲ್, ನೃಪತುಂಗ ರಸ್ತೆ, ಕೆಜಿ ರಸ್ತೆ, ಮೈಸೂರು ಬ್ಯಾಂಕ್ ರಸ್ತೆ ಮಾರ್ಗವಾಗಿ ಜ್ಞಾನಜ್ಯೋತಿ ಸಭಾಂಗಣ ಸೇರಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಜಿಸಿರುವ ಜಾನಪದ ಕಲಾತಂಡಗಳು ಭಾಗವಹಿಸಲಿವೆ.

    ಉಚಿತ ಟೀ ಶರ್ಟ್, ಕ್ಯಾಪ್

    ವಾಕಥಾನ್​ನಲ್ಲಿ ಭಾಗವಹಿಸುವ ಎಲ್ಲ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಟೀ ಶರ್ಟ್ ಮತ್ತು ಕ್ಯಾಪ್ ನೀಡಲಾಗುತ್ತದೆ. ಭಾಗವಹಿಸಿದ ವಿದ್ಯಾರ್ಥಿನಿಯರಿಗೆ ವಿಜಯವಾಣಿ ಹಾಗೂ ದಿಗ್ವಿಜಯ 247 ನ್ಯೂಸ್​ನಿಂದ ಪ್ರಮಾಣಪತ್ರ ನೀಡಲಾಗುತ್ತದೆ.

    ವಾಕಥಾನ್

    ಆರಂಭ: ವಿಧಾನಸೌಧ ಮುಂಭಾಗ

    ಸಮಯ: ಬೆಳಗ್ಗೆ 7 ಗಂಟೆ

    ಮಾರ್ಗ: ನೃಪತುಂಗ ರಸ್ತೆ ಮಾರ್ಗವಾಗಿ ಜ್ಞಾನಜ್ಯೋತಿ ಸಭಾಂಗಣ

    ಸಭಾ ಕಾರ್ಯಕ್ರಮ

    ಸ್ಥಳ: ಜ್ಞಾನಜ್ಯೋತಿ ಸಭಾಂಗಣ

    ಸಮಯ: ಬೆಳಗ್ಗೆ 10.30ರಿಂದ

    ಸಾಂಸ್ಕೃತಿಕ ಸ್ಪರ್ಧೆ

    ಸಾಂಪ್ರದಾಯಿಕ ಉಡುಗೆ ತೊಡುಗೆಯ ಫ್ಯಾಶನ್ ಶೋ, ಜಾನಪದ ನೃತ್ಯ, ಹಾಡು, ಸಂಗೀತ ಕಾರ್ಯಕ್ರಮ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts