ಅರಣ್ಯದೊಳಗೆ ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ!; 15 ದಿನಗಳ ಹಿಂದೆ ತಂದು ಹಾಕಿರುವ ಶಂಕೆ

Trolly Bag
Published on

ಕೊಡಗು: ಕೊಲೆ ಮಾಡಿ ಬಳಿಕ ಶವವನ್ನು ಎಲ್ಲೋ ಎಸೆದು ಹೋಗುವಂಥ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿದ್ದು, ಇದೀಗ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಅರಣ್ಯ ಪ್ರದೇಶವೊಂದರಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಈ ಶವ ಕಂಡುಬಂದಿದೆ.

ಕೊಡಗಿನ ವಿರಾಜಪೇಟೆ ಸಮೀಪದ ಮಾಕುಟ್ಟ ಅರಣ್ಯ ಪ್ರದೇಶದಲ್ಲಿ ಟ್ರಾಲಿ ಬ್ಯಾಗ್​ನಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 25ರಿಂದ 35 ವರ್ಷದ ಮಹಿಳೆಯ ಮೃತದೇಹ ಎಂದು ಪೊಲೀಸರು ಅಂದಾಜಿಸಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ತಂದು ಹಾಕಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ಸುಮಾರು 15 ದಿನಗಳ ಹಿಂದೆ ಕೊಲೆ ಆದಂತಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಮಡಿಕೇರಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಇದು ಕೊಡಗು-ಕೇರಳ ಗಡಿಭಾಗದ ಅರಣ್ಯ ಪ್ರದೇಶವಾಗಿದ್ದು, ಕೇರಳದ ಮಹಿಳೆ ಇರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಎಸ್​ಪಿ ಕೆ.ರಾಮರಾಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net