ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ ಸಖಿ ಒನ್ ಸ್ಟಾಪ್ ಸೆಂಟರ್, ಮಿಷನ್ ಶಕ್ತಿ ಯೋಜನೆಯ ಮಹಿಳಾ ಸಬಲೀಕರಣ ಘಟಕ ಹಾಗೂ ಸಾಂತ್ವನ ಕೇಂದ್ರಗಳ ಮೂಲಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಅತೀ ಕಡಿಮೆ ಲಿಂಗಾನುಪಾತ ಇರುವ ತಾಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೀದಿ ನಾಟಕಗಳ ಮುಖಾಂತರ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿಯರ ಕುರಿತಂತೆ ತಾಲೂಕಾ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಅರಿವು ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗಿದೆ. 2024-2025 ನೇ ಸಾಲಿನ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಜಿಲ್ಲೆಯಲ್ಲಿ ಜನೆವರಿ 2025 ರಿಂದ ಮಾರ್ಚ 2025 ರವರೆಗೆ 26 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಬಾಲಕಿಯರ ವಸತಿ ನಿಲಯಗಳಲ್ಲಿ 50 ವಿದ್ಯಾರ್ಥಿಗಳು ವಸತಿ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಸ್ವಾಧಾರ ಗೃಹ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ, ಪಾಲನಾ ಯೋಜನೆ, ಸಖಿ ನಿವಾಸ ಉದ್ಯೋಗ ಮಹಿಳೆಯರ ವಸತಿ ನಿಲಯ, ಮಹಿಳಾ ಮತ್ತು ಮಕ್ಕಳ ದೌರ್ಜನ್ಯ ತಡೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ತಡೆ ಯೋಜನೆ, ಸ್ವೀಕಾರ ಕೇಂದ್ರ, ವಿಧವಾ ಕೋಶ ಯೋಜನೆ , ಸಾಂತ್ವನ ಯೋಜನೆ, ಜಿಲ್ಲಾ ಮತ್ತು ತಾಲೂಕು ಶಿಶು ಪಾಲನಾ ಯೋಜನೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.