ದೇಶದ ಆರ್ಥಿಕತೆ ಬೆಳೆಯಲು ಮಹಿಳೆಯರು ಕಾರಣ

h9-kle
Published on

ಹುಬ್ಬಳ್ಳಿ: ಇಲ್ಲಿಯ ಕೆಎಲ್ಇ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.

ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ಎಂ.ಆರ್. ಪಾಟೀಲ ಮಾತನಾಡಿ, ಎಲ್ಲ ರಂಗದಲ್ಲೂ ಮಹಿಳೆಯರು ಸೇವೆ ಸಲ್ಲಿಸುತ್ತಿದ್ದಾರೆ. ಕುಟುಂಬ ನಿರ್ವಹಣೆಯಿಂದ ಹಿಡಿದು ತಾವು ಪಡೆದ ಹುದ್ದೆಯಲ್ಲೂ ಕರ್ತವ್ಯ ನಿಷ್ಠೆ ತೋರಿಸುತ್ತಿದ್ದಾರೆ. ದೇಶದ ಆರ್ಥಿಕತೆ ಬೆಳೆಯುವಲ್ಲಿ ಮಹಿಳೆಯರ ಪಾತ್ರವೂ ಅತ್ಯಧಿಕವಾಗಿದೆ ಎಂದರು.

ಹಿರಿಯ ಪ್ರಾಧ್ಯಾಪಕಿ ಪ್ರೊ. ಗೀತಾ ಸಿ. ಬೆಲ್ಲದ ಅವರನ್ನು ಸನ್ಮಾನಿಸಲಾಯಿತು.

ಡಾ. ಗುರುನಾಥ ಕಂಪ್ಲಿ, ಡಾ. ಮನೋಜ ಹಿತವಾಡಗಿ, ಡಾ. ಆನಂದ ಹುನಶ್ಯಾಳ, ಡಾ. ರೂಪಾ ಕೆ., ಪ್ರೊ. ಪ್ರೇಮಾ ಮಳಲಿ, ಪ್ರೊ. ಪಂಡಿತ ಆರಾಧ್ಯ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net