More

    ಮಹಿಳಾ ಕ್ರೀಡಾಪಟುಗಳ ಪ್ರತಿಭಟನೆಗೆ ರೈತ ಸಂಘಟನೆ ಬೆಂಬಲ

    ಕುರುಗೋಡು: ದೆಹಲಿಯಲ್ಲಿ ಸತತ 10 ದಿನಗಳಿಂದ ನಡೆಯುತ್ತಿರುವ ಮಹಿಳಾ ಕ್ರೀಡಾಪಟುಗಳ ಹೋರಾಟಕ್ಕೆ ಎಐಕೆಕೆಎಂಎಸ್ ರೈತ ಸಂಘಟನೆ ಬಾದನಹಟ್ಟಿ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಸುವ ಮೂಲಕ ಬೆಂಬಲ ಸೂಚಿಸಿದೆ.

    ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಮಹಿಳಾ ಕ್ರೀಡಾಪಟುಗಳನ್ನು ಸೆಕ್ಸಿಯಾಗಿ ಚಿತ್ರೀಕರಿಸುವಂತಿಲ್ಲ!

    ರೈತ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ ಮಾತನಾಡಿ, ಭಾರತದ ಕುಸ್ತಿ ಫೆಡರೇನ್ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್‌ಸಿಂಗ್ ಮತ್ತಿತರ ತರಬೇತುದಾರರು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಅವರನ್ನು ಕೂಡಲೇ ಬಂಧಿಸಬೇಕು. ದೆಹಲಿಯಲ್ಲಿ ನಡೆಸುತ್ತಿರುವ ಧರಣಿ 11 ದಿನ ಪೂರೈಸಿದರೂ ದೆಹಲಿ ಪೊಲೀಸರು ಆರೋಪಿಗಳನ್ನು ಬಂಧಿಸಿಲ್ಲ.

    ಬ್ರಿಜ್ ಭೂಷಣ್‌ಸಿಂಗ್ ಸಂಸದರಾಗಿದ್ದು, ಅವರ ಪ್ರಭಾವಕ್ಕೆ ಪೊಲೀಸರು ಮಣಿದಿದ್ದಾದ್ದಾರೆ. ವಿಶ್ವ ಚಾಂಪಿಯನ್‌ಷಿಪ್, ಒಲಂಪಿಕ್ಸ್ ಹಾಗೂ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗಳಿಸಿರುವ ಈ ಕುಸ್ತಿ ಪಟುಗಳು ನೀಡಿರುವ ದೂರಿಗೆ, ಅವರ ಹೋರಾಟಕ್ಕೆ ಬೆಲೆ ಇಲ್ಲದಂತಾಗಿದೆ ಎಂದರು.

    ದೂರು ನೀಡಿರುವ ಏಳು ಸಂತ್ರಸ್ತೆಯರಲ್ಲಿ ಬಾಲಕಿಯೂ ಇದ್ದಾಳೆ. ಆದ್ದರಿಂದ, ಈ ಪ್ರಕರಣ ಪೋಕ್ಸೋ ಕಾಯ್ದೆ ಅಡಿ ಬರುತ್ತದೆ. ಇಷ್ಟಾದರೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಇದನ್ನು ಗಮನಿಸಿದ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಹಿಂದೆ ಈ ಪ್ರಕರಣದ ತನಿಖೆ ನಡೆಸಿದ ಮೇರಿಕೋಂ ಸಮಿತಿಯ ವರದಿಯನ್ನು ಕ್ರೀಡಾ ಇಲಾಖೆ ಬಹಿರಂಗಪಡಿಸಿಲ್ಲ. ಇದು ಮತ್ತಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

    ಆರೋಪಿಗಳು ರಾಜಾರೋಷವಾಗಿ ತಿರುಗಾಡಿಕೊಂಡಿದ್ದು, ಸಾಕ್ಷೃನಾಶಗೊಳಿಸಲು ಯತ್ನಿಸಿದ್ದಾರೆ. ದೂರು ಹಿಂಪಡೆಯಲು ಒತ್ತಾಯಿಸಿ ಸಂತ್ರಸ್ತೆಯ್ತರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts