Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಸಂಖ್ಯೆಗಳು ನಮ್ಮ ಜೀವನದ ಎಲ್ಲ ವಿಷಯಗಳೊಂದಿಗೆ ಆಳವಾದ ಸಂಬಂಧವನ್ನು ಹೊಂದಿವೆ. ಅಲ್ಲದೆ, ಈ ಸಂಖ್ಯೆಗಳು ನೈಸರ್ಗಿಕವಾಗಿ ವಿಶ್ವದಲ್ಲಿ ವಿಶಿಷ್ಟ ಶಕ್ತಿಯನ್ನು ಹೊಂದಿದ್ದು, ಯಾರನ್ನಾದರೂ ಮೇಲಕ್ಕೇರಿಸಬಹುದು ಮತ್ತು ಕೆಳಗಿಳಿಸಬಹುದು.
ಅಂದಹಾಗೆ ಸಂಖ್ಯಾಶಾಸ್ತ್ರವು ವ್ಯಕ್ತಿಯ ಹೆಸರು, ಆತನ ಹುಟ್ಟಿದ ದಿನಾಂಕ, ತಿಂಗಳು, ವರ್ಷದ ಆಧಾರದ ಮೇಲೆ ಅವರ ಭವಿಷ್ಯದ ಜೀವನ ಹೇಗಿರುತ್ತದೆ ಎಂದು ಊಹಿಸುವ ವಿಜ್ಞಾನವಾಗಿದೆ. ಈ ಸಂಖ್ಯಾಶಾಸ್ತ್ರವನ್ನು ರಾಡಿಕ್ಸ್ ಸಂಖ್ಯೆಗಳ ಆಧಾರದ ಮೇಲೆ ಹೇಳಲಾಗುತ್ತದೆ. ಒಬ್ಬ ವ್ಯಕ್ತಿಯ ಜನ್ಮ ದಿನಾಂಕದ ಮೊತ್ತವನ್ನು ರಾಡಿಕ್ಸ್ ಸಂಖ್ಯೆ ಅಥವಾ ಮೂಲಾಂಕ ಎಂದು ಕರೆಯಲಾಗುತ್ತದೆ. ಉದಾಹರಣೆಗೆ ಒಬ್ಬ 24ನೇ ತಾರೀಖಿನಂದು ಜನಿಸಿದರೆ ಆತನ ರಾಡಿಕ್ಸ್ ಸಂಖ್ಯೆ 2+4= 6 ಆಗಿರುತ್ತದೆ.
ರಾಶಿಗಳಂತೆ ರಾಡಿಕ್ಸ್ ಸಂಖ್ಯೆಗಳು ಕೂಡ ಗ್ರಹಗಳೊಂದಿಗೆ ಸಂಬಂಧ ಹೊಂದಿವೆ. ಸಂಖ್ಯಾಶಾಸ್ತ್ರದಲ್ಲಿ 01 ರಿಂದ 09ರವರೆಗಿನ ಸಂಖ್ಯೆಗಳನ್ನು ರಾಡಿಕ್ಸ್ ಸಂಖ್ಯೆಗಳು ಎಂದು ಹೇಳಲಾಗುತ್ತದೆ. ಈ ಒಂಬತ್ತು ರಾಡಿಕ್ಸ್ ಸಂಖ್ಯೆಗಳು ಕೂಡ ನವಗ್ರಹಗಳಲ್ಲಿ ಒಂದೊಂದು ಗ್ರಹಗಳಿಗೆ ಸೀಮಿತವಾಗಿವೆ.
ಸಂಖ್ಯಾಶಾಸ್ತ್ರದ ಪ್ರಕಾರ, ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ತಮ್ಮ ಗಂಡಂದಿರಿಗೆ ಅದೃಷ್ಟವನ್ನು ತರುವ ದೇವತೆಗಳೆಂದು ಹೇಳಲಾಗುತ್ತದೆ. ಕೆಲವು ನಿರ್ದಿಷ್ಟ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ತಮ್ಮ ಸಂಗಾತಿಯ ಜೀವನದಲ್ಲಿ ಸಮೃದ್ಧಿ, ಯಶಸ್ಸು ಮತ್ತು ಸ್ಥಿರತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಆ ನಿಟ್ಟಿನಲ್ಲಿ, ಯಾವ ದಿನಾಂಕಗಳಲ್ಲಿ ಜನಿಸಿದ ಮಹಿಳೆಯರು ದಾಂಪತ್ಯ ಜೀವನದಲ್ಲಿ ಅದೃಷ್ಟ ತರುತ್ತಾರೆ ಅನ್ನೋದನ್ನ ನಾವೀಗ ತಿಳಿದುಕೊಳ್ಳೋಣ.
ಸಂಖ್ಯೆ 1 (ಜನನ ದಿನಾಂಕ 1, 10, 19 ಮತ್ತು 28)
ಜೀವನ ಪಥ ಸಂಖ್ಯೆ 1 ರಲ್ಲಿ ಜನಿಸಿದ ಮಹಿಳೆಯರು ಹೆಚ್ಚಿನ ಇಚ್ಛಾಶಕ್ತಿ ಮತ್ತು ಸ್ಪಷ್ಟ ಚಿಂತನೆಯನ್ನು ಹೊಂದಿರುತ್ತಾರೆ. ಅವರನ್ನು ಮದುವೆಯಾಗುವ ಪುರುಷರು ಅದೃಷ್ಟವಂತರು. ಅವರು ತಮ್ಮ ಸಂಗಾತಿಗೆ ಸರಿಯಾದ ಜೀವನ ಮಾರ್ಗವನ್ನು ತೋರಿಸುವ ಪತ್ನಿಯರಾಗಿರುತ್ತಾರೆ. ಅವರು ಆತ್ಮವಿಶ್ವಾಸ, ಸ್ವಾತಂತ್ರ್ಯ ಮತ್ತು ನಿರ್ಣಾಯಕತೆಯೊಂದಿಗೆ ಸಮತೋಲಿತ ಮತ್ತು ಬೆಂಬಲ ನೀಡುವ ದಾಂಪತ್ಯ ಜೀವನವನ್ನು ಸೃಷ್ಟಿಸುವ ಮಹಿಳೆಯರಾಗಿರುತ್ತಾರೆ.
ಸಂಖ್ಯೆ 5 (ಜನ್ಮ ದಿನಾಂಕ 5, 14 ಮತ್ತು 23)
5ನೇ ಸಂಖ್ಯೆಯ ಅಡಿಯಲ್ಲಿ ಜನಿಸಿದ ಮಹಿಳೆಯರು ಸ್ವಯಂಪ್ರೇರಿತರು ಮತ್ತು ಸಾಹಸಮಯರು. ಅವರನ್ನು ಸುಲಭವಾಗಿ ನಿಭಾಯಿಸಬಹುದು. ಅವರು ಮದುವೆಯಾಗುವ ಪುರುಷರಿಗೆ ಪರಿಪೂರ್ಣ ಸಂಗಾತಿಗಳು. ಅವರು ನಾಳೆಯನ್ನು ಆಸಕ್ತಿದಾಯಕ ಮತ್ತು ಯಶಸ್ವಿಗೊಳಿಸುವ ಸಾಮರ್ಥ್ಯವನ್ನು ಹೊಂದಿರುತ್ತಾರೆ. ಅವರ ಮುಕ್ತ ಮನಸ್ಸು ಮತ್ತು ಸ್ಪಷ್ಟ ಸಂವಹನವು ಅವರ ಗಂಡಂದಿರನ್ನು ಒತ್ತಡದಿಂದ ಮುಕ್ತವಾಗಿರಿಸುತ್ತದೆ. ಅವರ ಶಕ್ತಿ ಮತ್ತು ದಿಟ್ಟ ಸ್ವಭಾವವು ಸರಿಯಾದ ಅವಕಾಶವನ್ನು ಬಳಸಿಕೊಳ್ಳಲು ಸಹಾಯ ಮಾಡುತ್ತದೆ.
ಸಂಖ್ಯೆ 3 (ಜನ್ಮದಿನಾಂಕ 3, 12, 21 ಮತ್ತು 30)
3ನೇ ಸಂಖ್ಯೆಯಲ್ಲಿ ಜನಿಸಿದ ಜನರು ಸುಂದರವಾಗಿ ಕಾಣುತ್ತಾರೆ. ಅವರು ಸೃಜನಶೀಲರು ಮತ್ತು ಆತ್ಮವಿಶ್ವಾಸದಿಂದ ಕೂಡಿರುತ್ತಾರೆ. ಯಾವುದೇ ದೊಡ್ಡ ಸಮಸ್ಯೆಗಳನ್ನು ಶಾಂತವಾಗಿ ನಿಭಾಯಿಸುವ ಸಾಮರ್ಥ್ಯ ಅವರಲ್ಲಿರುತ್ತದೆ. ಅವರ ಮುಕ್ತ ಸ್ವಭಾವವು ವೈವಾಹಿಕ ಸಂಬಂಧಕ್ಕೆ ಹೆಚ್ಚುವರಿ ಸಂತೋಷವನ್ನು ನೀಡುತ್ತದೆ, ಅದೇ ಸಮಯದಲ್ಲಿ ಸಂಗಾತಿಯನ್ನು ಪ್ರೋತ್ಸಾಹಿಸುತ್ತದೆ. ಅವರು ತಮ್ಮ ಪತಿಗೆ ಅದೃಷ್ಟವನ್ನು ನೀಡುವ ಸಾಮರ್ಥ್ಯವನ್ನು ಹೊಂದಿರುತ್ತಾರೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು, ಜ್ಯೋತಿಷಿಗಳು, ಪಂಚಾಂಗಗಳು, ನಂಬಿಕೆಗಳು ಹಾಗೂ ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದನ್ನು ವಿಜಯವಾಣಿ ವೆಬ್ಸೈಟ್ ಜವಾಬ್ದಾರರಾಗಿರುವುದಿಲ್ಲ.
ಈ ದಿನಾಂಕಗಳಂದು ಜನಿಸಿದ ಮಹಿಳೆಯರನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲವಂತೆ! Numerology
ಈ 3 ರಾಶಿಯವರು ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ! ನಿಮ್ಮದೂ ಇದೇ ರಾಶಿನಾ? Zodiac Signs