More

    ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗಾದ್ರೂ ಸ್ಥಾನ ನೀಡಿ: ದೆಹಲಿ ಸಿಎಂ ಕೇಜ್ರಿವಾಲ್​ಗೆ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ

    ನವದೆಹಲಿ: ಸಚಿವ ಸಂಪುಟದಲ್ಲಿ ಒಬ್ಬ ಮಹಿಳೆಗಾದರೂ ಸ್ಥಾನ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರಿಗೆ ಪತ್ರ ಬರೆದಿದೆ.

    ಸಂವಿಧಾನದ 239 (5) ನೇ ವಿಧಿಯನ್ನು ತಿದ್ದುಪಡಿ ಮಾಡುವ ಮೂಲಕ ದೆಹಲಿ ಸರ್ಕಾರದ ಕ್ಯಾಬಿನೆಟ್‌ನಲ್ಲಿ ಕನಿಷ್ಠ ಒಬ್ಬ ಮಹಿಳೆಯನ್ನಾದರೂ ಸೇರಿಸಲು ಮುಖ್ಯಮಂತ್ರಿ ಅವರಿಗೆ ಸೂಚಿಸುವಂತೆ ಮಹಿಳಾ ಆಯೋಗಕ್ಕೆ ಅರ್ಜಿ ಸಲ್ಲಿಕೆಯಾಗಿದೆ.

    ಈ ವಿಷಯ ಮಹಿಳಾ ಆಯೋಗದ ಅಧ್ಯಕ್ಷರ ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಕಳವಳ ವ್ಯಕ್ತಪಡಿಸಿ ದೆಹಲಿ ಸಿಎಂ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ.

    ರಾಜಕೀಯ ಸಮಾನತೆ, ರಾಜಕೀಯ ನಾಯಕತ್ವ ಮತ್ತು ಅಧಿಕಾರ ಹಂಚಿಕೆ ಸೇರಿ ವಿವಿಧ ರೀತಿಯ ಸಮಾನತೆಯು ಅತ್ಯಂತ ಮೂಲಭೂತವಾಗಿದೆ. ಇತರ ಕ್ಷೇತ್ರಗಳಲ್ಲಿ ಸಮಾನತೆ ಸಾಧಿಸಲು ರಾಜಕೀಯ ಕೀಲಿಕೈಯಾಗಿರುವುದರಿಂದ ಇಲ್ಲಿ ಲಿಂಗವನ್ನು ಲೆಕ್ಕಿಸದೆ ಸಮಾನ ಪ್ರಾತಿನಿಧ್ಯ ಮತ್ತು ನಾಯಕತ್ವವನ್ನು ನೀಡಬೇಕು ಎಂದು ಅವರು ಬರೆದ ಪತ್ರದಲ್ಲಿ ಕೋರಿದ್ದಾರೆ.

    ನಿರ್ಧಾರ ಕೈಗೊಳ್ಳಲು ಮಹಿಳೆಯರು ಸಾಮರ್ಥ್ಯರಿದ್ದಾರೆ. ಹಾಗಾಗಿ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಸ್ಥಾನ ಮಾನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

    ಫೆಬ್ರವರಿ 16ರಂದು 3ನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದಾಗಲೂ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಇಲ್ಲದ್ದು ರಾಜಕೀಯ ವಲಯದಲ್ಲಿ ಹಲವರ ಹುಬ್ಬೇರುವಂತೆ ಮಾಡಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts