ಮನೆ ಮಾಲೀಕರಿಂದ ದಂಪತಿಗೆ ಕಿರುಕುಳ ಆರೋಪ: ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮನೆ ಬಾಡಿಗೆ ವಿಚಾರಕ್ಕೆ ಮನೆಮಾಲೀಕರು ಮತ್ತು ಬಾಡಿಗೆದಾರರ ನಡುವೆ ಜಗಳವಾಗಿದೆ. ಮನೆ ಮಾಲೀಕರು ತನ್ನ ಪತಿಯ ಮೇಲೆ ಹಲ್ಲೆ ನಡೆಸಿದ್ದರಿಂದ ಮನನೊಂದ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮಂಜುಳಾ (35) ಆತ್ಮಹತ್ಯೆ ಮಾಡಿಕೊಂಡಾಕೆ. ಮನೆ ಬಾಡಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ‌ ನಡೆದ ಹಿನ್ನೆಲೆ ಮಾಲೀಕರು ಮತ್ತು ಮೃತಳ ಕುಟುಂಬಸ್ಥರು ಪೊಲೀಸ್ ಠಾಣೆ ಮೆಟ್ಟೆಲೇರಿದ್ದರು. ಈ ವೇಳೆ ಪೊಲೀಸರ ಎದುರೇ ಮಾಲೀಕರು ದಂಪತಿ ಮೇಲೆ ಹಲ್ಲೆ ನಡೆಸಿದ್ದಾರೆ. ಪತಿಗೆ ಗಂಭೀರ ಗಾಯಗಳಾಗಿದ್ದವು ಪತಿಯನ್ನ ಚಿಕಿತ್ಸೆಗೆಂದು ಆಸ್ಪತ್ರೆಗೆ ಕಳುಹಿಸಿದ ಮಹಿಳೆ ಮನೆಯಲ್ಲಿ ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನನ್ನ ಸಾವಿಗೆ ಮನೆ ಮಾಲೀಕ ಸೋಮಶೇಖರ್, ಗೀತಾ ಮತ್ತು ಬಿಂದು ಎಂಬುವರೇ ಕಾರಣ, ಅವರನ್ನು ಬಿಡಬೇಡಿ. ಮಾಲೀಕರು ನಮ್ಮ ಮೇಲೆ ಪೊಲೀಸರೆದುರೇ ಹಲ್ಲೆ ನಡೆಸಿದ್ದಾರೆ. ಆದರೂ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ವಿಡಿಯೋದಲ್ಲಿ ದೂರಿದ್ದಾಳೆ. ದೇವನಹಳ್ಳಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *