More

    ಪ್ರಜ್ವಲ್ ಬಂಧನಕ್ಕೆ ಮಹಿಳಾ ಕಾಂಗ್ರೆಸ್ ಆಗ್ರಹ

    ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ:

    ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಬಂಧಿಸಬೇಕೆಂದು ಆಗ್ರಹಿಸಿ ಹು-ಧಾ ಮಹಾನಗರ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದರು.

    ಹುಬ್ಬಳ್ಳಿಯ ಚನ್ನಮ್ಮ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಪ್ರಜ್ವಲ್​ರನ್ನು ಭಾರತಕ್ಕೆ ವಾಪಸ್ ಕರೆಯಿಸಲು ಕೇಂದ್ರ ಸರ್ಕಾರ ಕ್ರಮ ಜರುಗಿಸಬೇಕು. ಭಾರತಕ್ಕೆ ಬಂದ ಮೇಲೆ ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು. ಲೋಕಸಭೆ ಚುನಾವಣೆಯಲ್ಲಿ ಪ್ರಜ್ವಲ್ ಪರ ಮತ ಯಾಚಿಸಿದ ಬಿಜೆಪಿ ನಾಯಕರಿಗೆ ಧಿಕ್ಕಾರ ಎಂದು ಘೊಷಣೆ ಕೂಗಿದರು.

    ಪ್ರತಿಭಟನೆಯ ನೇತೃತ್ವ ವಹಿಸಿದ್ದ ಧಾರವಾಡ ಲೋಕಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ದಿನೇಶ ಗುಂಡೂರಾವ್ ಮಾತನಾಡಿ,

    ಪ್ರಜ್ವಲ್ ರೇವಣ್ಣ ನಡೆಸಿರುವುದು ವಿಕೃತ ಘಟನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದೆ. ಈ ರೀತಿ ಆಗಿಲ್ಲ ಎಂದು ಬಿಜೆಪಿಯವರು ಹೇಳಿಕೆ ನೀಡುತ್ತಿರುವುದು ದುರದೃಷ್ಟಕರ ಸಂಗತಿ. ಇದು ಬಿಜೆಪಿಯ ಮನಸ್ಥಿತಿಯನ್ನು ತೋರಿಸುತ್ತದೆ. ವಿದ್ಯಾರ್ಥಿನಿ ನೇಹಾ ಹಿರೇಮಠ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದರು.

    ಇಷ್ಟು ದೊಡ್ಡ ಪ್ರಕರಣ ನಡೆದಿದ್ದರೂ ರಾಷ್ಟ್ರೀಯ ಮಹಿಳಾ ಆಯೋಗ ಯಾಕೆ ಬಂದಿಲ್ಲ. ? ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಯಾಕೆ ಬಾಯಿ ಬಿಡುತ್ತಿಲ್ಲ ? ಎಲ್ಲವು ಗೊತ್ತಿದ್ದು ಪ್ರಜ್ವಲ್ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಿದ್ದನ್ನು ಗಮನಿಸಿದರೆ ಬಿಜೆಪಿ-ಜೆಡಿಎಸ್​ನವರು ಯಾವ ರೀತಿ ಮಹಿಳೆ ಪರ ಇದ್ದಾರೆ ಎಂಬುದು ಗೊತ್ತಾಗುತ್ತದೆ. ಪ್ರಜ್ವಲ್​ನನ್ನು ಭಾರತಕ್ಕೆ ಕರೆತರಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

    ಶಾಸಕ ಪ್ರಸಾದ ಅಬ್ಬಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸದಾನಂದ ಡಂಗನವರ, ಶಾಕೀರ ಸನದಿ, ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ, ಶಿವಲೀಲಾ ಕುಲಕರ್ಣಿ, ದೇವಕಿ ಜಿ., ಅಲ್ತಾಫ್ ಹಳ್ಳೂರ, ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts