More

    ಮಹಿಳೆಯರಿಗಿಲ್ಲ ಸೂಕ್ತ ರಕ್ಷಣೆ

    ಹಿರೀಸಾವೆ: ಸಮಾಜದಲ್ಲಿ ಮಹಿಳೆಯರಿಗೆ ಇನ್ನೂ ಸರಿಯಾದ ರಕ್ಷಣೆ ಸಿಗುತ್ತಿಲ್ಲ ಎಂದು ದಿಡಗ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸವಿತಾ ಹೇಳಿದರು.
    ಹೋಬಳಿಯ ದಿಡಗ ಗ್ರಾಮದ ಸುವರ್ಣ ಭವನದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿ, ಮಹಾತ್ಮ ಗಾಂಧೀಜಿ ಅವರು ಕಂಡ ಕನಸಿನ ಭಾರತ ನಿರ್ಮಾಣವಾಗುವುದು ಯಾವಾಗ ಎಂದು ಪ್ರಶ್ನಿಸಿದರು.

    ರಸ್ತೆಗಳಲ್ಲಿ ನಡೆದು ಸಾಗುವ ಹಾಗೂ ಜಮೀನಿನಲ್ಲಿ ಜಾನುವಾರು ಮೇಯಿಸುವ ಒಂಟಿ ಮಹಿಳೆಯರ ಕುತ್ತಿಗೆಗೆ ಕೈ ಹಾಕಿ ಹಾಡಹಗಲೇ ಮಾಂಗಲ್ಯ ಸರ ಕಿತ್ತೊಯ್ಯುತ್ತಿದ್ದಾರೆ. ಒಂಟಿ ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿದೆ. ಜೀವನದ ಬಗ್ಗೆ ಅದೆಷ್ಟೋ ಕನಸು ಕಂಡಿರುವ ಹೆಣ್ಣುಮಕ್ಕಳು ಬಾಲ್ಯವಿವಾಹದ ಸುಳಿಗೆ ಸಿಲುಕುತ್ತಿದ್ದಾರೆ. ಸ್ವಾತಂತ್ರ್ಯ ಸಿಕ್ಕಿ ಏಳು ದಶಕ ಕಳೆದರೂ ಹೆಣ್ಣುಮಕ್ಕಳ ಮೇಲಿನ ದೌರ್ಜನ್ಯ ಇನ್ನೂ ಕಡಿಮೆಯಾಗಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

    ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಗೃಹಲಕ್ಷ್ಮಿ ಸೇರಿದಂತೆ ಸಾಕಷ್ಟು ಯೋಜನೆಗಳನ್ನು ರೂಪಿಸಿ ಜಾರಿಗೊಳಿಸಿದೆ. ಆದರೆ ಕೆಲ ಸಣ್ಣ-ಪುಟ್ಟ ತಾಂತ್ರಿಕ ದೋಷಗಳಿಂದಾಗಿ ಅದೆಷ್ಟೋ ಮಹಿಳೆಯರಿಗೆ ಇನ್ನೂ ಸೌಲಭ್ಯ ತಲುಪಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆಗಳನ್ನು ಮುಕ್ತಗೊಳಿಸಿ ಫಲಾನುಭವಿಗಳಿಗೆ ಶೀಘ್ರದಲ್ಲಿಯೇ ಸೌಲಭ್ಯಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

    ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್.ಪ್ರಕಾಶ್ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರ ಸಹಕಾರದೊಂದಿಗೆ ಗ್ರಾಮೀಣ ಭಾಗದಲ್ಲಿ ಕಾರ್ಯಾಚರಣೆ ನಡೆಸಿ ನಾಡಕಚೇರಿ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಅಗತ್ಯ ದಾಖಲಾತಿಗಳನ್ನು ನೋಂದಾಯಿಸಿ ಸರಿಪಡಿಸುವ ಮೂಲಕ ಸಾಕಷ್ಟು ಮಹಿಳೆಯರಿಗೆ ಗೃಹಲಕ್ಷ್ಮಿ ಹಾಗೂ ಇತರ ಯೋಜನೆಗಳ ಸೌಲಭ್ಯ ತಲುಪುವಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

    ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್, ಸದಸ್ಯರಾದ ಆನಂದ್, ಉಮೇಶ್, ಸೌಮ್ಯಾ ಗವೀಶ್, ಯಶಸ್ವಿನಿ ರತ್ನರಾಜ್, ಗೀತಾ, ವಿನೋದಾ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ನೀರುಗಂಟಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts