More

    ಮಹಿಳಾ ಸಬಲೀಕರಣಕ್ಕೆ ಸಹಕಾರಿ

    ಯಲಬುರ್ಗಾ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮಹಿಳೆಯರ ಸ್ವಾವಲಂಬಿ ಜೀವನಕ್ಕಾಗಿ ಹಲವಾರು ಯೋಜನೆ ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಪಡಿಯಿರಿ ಎಂದು ಪತ್ರಕರ್ತ ಬಸವರಾಜ ಮುಂಡರಗಿ ಹೇಳಿದರು.

    ಇದನ್ನೂ ಓದಿ: ಮಹಿಳಾ ಕಾರ್ಯಕ್ರಮಗಳಿಗೆ ಪ್ರೋತ್ಸಾಹ

    ತಾಲೂಕಿನ ಮಂಡಲಮರಿ ಗ್ರಾಮದ ಶ್ರೀ ಶರಣಬಸವೇಶ್ವರ ದೇವಸ್ಥಾನದಲ್ಲಿ ಜ್ಞಾನ ವಿಕಾಸ ಕೇಂದ್ರದಿಂದ ಆರಂಭಗೊಂಡ ಶ್ರೀಧರಣಿ ಮಹಿಳಾ ಒಕ್ಕೂಟವನ್ನು ಉದ್ಘಾಟಿಸಿ ಶನಿವಾರ ಮಾತನಾಡಿದರು.

    ಸಂಸ್ಥೆಯಿಂದ ಗ್ರಾಮೀಣ ಮಹಿಳೆಯರು ವಿವಿಧ ಉದ್ಯೋಗದಲ್ಲಿ ತೊಡುಗುವ ಮೂಲಕ ಆರ್ಥಿಕವಾಗಿ ಸಬಲರಾಗಿ, ಜೀವನಮಟ್ಟವನ್ನು ಸುಧಾರಿಸಿಕೊಂಡಿದ್ದಾರೆ ಎಂದರು. ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ಗೀತಾ ಓಲೆಕಾರ ಮಾತನಾಡಿ, ಡಾ.ವೀರೇಂದ್ರ ಹೆಗ್ಗಡೆ ಆಶಯದಂತೆ ಸ್ವಾಸ್ಥೃ ಸಮಾಜದ ನಿರ್ಮಾಣ, ದುರ್ಬಲ ವರ್ಗದವರ ಆರ್ಥಿಕ ಸಬಲತೆ,

    ಸರ್ವರಿಗೂ ಆರೋಗ್ಯ ಭಾಗ್ಯದಂತಹ ಕಾರ್ಯಕ್ರಮಗಳನ್ನು ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಪ್ರತಿಯೊಬ್ಬರಿಗೂ ತಲುಪಿಸಲಾಗುತ್ತಿದೆ ಎಂದರು.
    ಜ್ಞಾನವಿಕಾಸ ಕೇಂದ್ರದ ತಾಲೂಕು ವಿಕ್ಷಣಾಧಿಕಾರಿ ಶ್ರೀದೇವಿ ಸಣ್ಣಕ್ಕಿ, ವಲಯ ಮೇಲ್ವಿಚಾರಕಿ ಚನ್ನಮ್ಮ ಗೌಡ್ರ, ಶ್ರೀಧರಣಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಮಹಾದೇವಿ ಬಡಿಗೇರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts