More

    ಸೀಟಿಗಾಗಿ ಬಡಿದಾಡಿಕೊಂಡ ಮಹಿಳೆಯರು; ನಿಜವಾದ ನಾರಿಶಕ್ತಿ ಅನಾವರಣ ಎಂದ ನೆಟ್ಟಿಗರು

    ಹೈದರಾಬಾದ್​: ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಅಧಿಕಾರಕ್ಕೇರಿರುವ ಕಾಂಗ್ರೆಸ್​, ತೆಲಂಗಾಣದಲ್ಲಿಯೂ ಇದೇ ತಂತ್ರವನ್ನು ಬಳಸಿ ಆಡಳಿತ ಚುಕ್ಕಾಣಿ ಹಿಡಿದಿದೆ. ಇದೀಗ ಕರ್ನಾಟಕದಂತೆ ತೆಲಂಗಾಣದಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿದೆ. ರಾಜ್ಯಾದ್ಯಂತ ಮಹಿಳೆಯರಿಂದ ಭರ್ಜರಿ ರೆಸ್ಪಾನ್ಸ್​ ದೊರೆತ್ತಿದ್ದು, ಬಸ್​ನಲ್ಲಿ ಪ್ರಯಾಣಿಸಲು ನೂಕುನುಗ್ಗಲು ಉಂಟಾಗುತ್ತಿದೆ.

    ಕೆಲವೆಡೆ ಮಹಿಳೆಯರು ಬಸ್​ ಹತ್ತುವಾಗ ಡೋರ್​, ಕಿಟಕಿಯ ಸರಳುಗಳು ಕಿತ್ತುಕೊಂಡು ಬಂದಿರುವ ಫೋಟೋ ಹಾಗು ವಿಡಿಯೋವನ್ನು ನಾವು ನೋಡಿದ್ದೇವೆ. ಇದೀಗ ಕಳಿತುಕೊಳ್ಳುವ ವಿಚಾರವಾಗಿ ಮಹಿಳೆಯರಿಬ್ಬರ ನಡುವೆ ಹೊಡೆದಾಟವಾಗಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ಘಟನೆಯೂ ತೆಲಂಗಾಣದ ನಿರ್ಮಲ್ ಜಿಲ್ಲೆಯ ಮುಧೋಳೆಯಲ್ಲಿ ನಡೆದಿದೆ.

    ಇದನ್ನೂ ಓದಿ: ಕೃಷಿಕನಾಗುವುದು ತಪ್ಪಲ್ಲ, ಕೃಷಿಕ ಎಂದೇಳಲು ನಾಚಿಕೆ ಏಕೆ?: ಹೈಕೋರ್ಟ್

    ವೈರಲ್​ ಆಗಿರುವ ವಿಡಿಯೋದಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ನಡುವೆ ಮೊದಲಿಗೆ ಮಾತಿನ ಚಕಮಕಿ ಆರಂಭವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಇಬ್ಬರು ಪರಸ್ಪರ ಹೊಡೆದಾಡಿಕೊಳ್ಳಲು ಶುರು ಮಾಡುತ್ತಾರೆ. ಇಬ್ಬರ ನಡುವಿನ ಜಗಳವನ್ನು ಬಿಡಿಸಲು ಕಂಡಕ್ಟರ್​ ಹಾಗೂ ಸಹ ಪ್ರಯಾಣಿಕರು ಯತ್ನನಿತ್ನಿಸಿದರಾದ್ದರೂ ಯಾವುದೇ ಪ್ರಯೋಜನವಾಗುವುದಿಲ್ಲ.

    ಇನ್ನು ಘಟನೆಯ ವಿಡಿಯೋ ವೈರಲ್​ ಆಗಿದ್ದು, ನಿಜವಾದ ನಾರಿ ಶಕ್ತಿ ಅನಾವರಣ ಆಯಿತು ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ಧಾರೆ. ಸೋನಿಯಾ ಗಾಂಧಿ ಜನುಮದಿನದ ನಿಮಿತ್ತ ತೆಲಂಗಾಣ ಕಾಂಗ್ರೆಸ್​ ಸರ್ಕಾರವು ಮಹಿಳೆಯರ ಉಚಿತ ಬಸ್​ ಸೇವೆ ಒದಗಿಸುವ ಮಹಾಲಕ್ಷ್ಮೀ ಯೋಜೆನೆಗೆ ಚಾಲನೆ ನೀಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts