ಅಪ್ಪ ಮಗನಿಂದಲೇ ನಡೆಯಿತು ಗ್ಯಾಂಗ್​ ರೇಪ್​! ಕಾಮದಾಸೆ ತೀರಿಸಿಕೊಂಡು ಮಹಿಳೆಗೆ ಬೆಂಕಿ ಹಚ್ಚಿದ ಪಾಪಿಗಳು

rape 2
Published on

ಲಖನೌ: ಅಪ್ಪ ಮಗನ ಜೋಡಿಯೊಂದು ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯ ಮೇಲೆ ಗ್ಯಾಂಗ್​ ರೇಪ್​ ನಡೆಸಿದ್ದು, ಆ ಮಹಿಳೆಗೆ ಬೆಂಕಿ ಹಚ್ಚಿ ಕೊಲ್ಲುವ ಪ್ರಯತ್ನ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ನಡೆದಿದೆ.

ಸೀತಾಪುರ ಜಿಲ್ಲೆಯ ಮಿಶ್ರಿಕ್​ ಪ್ರದೇಶದಲ್ಲಿ ಮಹಿಳೆಯೊಬ್ಬಳು ಗುರುವಾರದಂದು ತನ್ನ ಮನೆಯಿಂದ ನಗರದ ಕಡೆ ತಳ್ಳು ಗಾಡಿಯಲ್ಲಿ ಪ್ರಯಾಣಿಸುತ್ತಿದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ಅಪ್ಪ ಮಗ ಮಹಿಳೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅದಾದ ಮೇಲೆ ಆಕೆಗೆ ಬೆಂಕಿ ಹಚ್ಚಿ ಅಲ್ಲಿಂದ ಪರಾರಿಯಾಗಿದ್ದಾರೆ.

ಬೆಂಕಿಯಲ್ಲಿ ಬೇಯುತ್ತಿದ್ದ ಮಹಿಳೆಯನ್ನು ಸ್ಥಳೀಯರು ನೋಡಿದ್ದು ತಕ್ಷಣವೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವಿಚಾರವಾಗಿ ಪೊಲೀಸ್​ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪೊಲೀಸರು ಹುಡುಕಿ ವಶಕ್ಕೆ ಪಡೆದಿದ್ದಾರೆ. ಮಹಿಳೆಯ ದೇಹ ಶೇ. 30 ಭಾಗ ಸುಟ್ಟಿದ್ದು ಆಕೆ ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿಸಲಾಗಿದೆ. ಸದ್ಯ ಆಕೆ ಸೀತಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. (ಏಜೆನ್ಸೀಸ್​)

ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net