More

    ಮಹಿಳೆಯರಿಂದ ಭ್ರಷ್ಟಾಚಾರ ರಹಿತ ಆಡಳಿತ

    ಬಣಕಲ್: ಮಹಿಳೆಯರು ರಾಜಕೀಯ ಪ್ರವೇಶ ಮಾಡಿದರೆ ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಸಾಧ್ಯ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು.

    ಬಿಳಗುಳ ಗ್ರಾಮದಲ್ಲಿ ಶುಕ್ರವಾರ ಬೆಂಗಳೂರು ದಿ ಹಂಗರ್ ಪ್ರಾಜೆಕ್ಟ್, ವಿಕಸನ ಸೇವಾ ಸಂಸ್ಥೆ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದಿಂದ ತಾಲೂಕಿನ ವಿವಿಧ ಗ್ರಾಪಂ ವ್ಯಾಪ್ತಿಯಲ್ಲಿ ಎಂಟು ದಿನ ಹಮ್ಮಿಕೊಂಡಿರುವ ‘ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುವಿಕೆ ಮೂಲಕ ಮಹಿಳಾಸಶಕ್ತೀಕರಣ’ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ರಾಜಕೀಯ ಪ್ರವೇಶ ಮಾಡಬೇಕೆಂದೇ ಶೇ.50 ಮೀಸಲಾತಿ ನೀಡಲಾಗಿದೆ. ಅದನ್ನು ಬಳಸಿಕೊಂಡು ಸಮಾಜಕ್ಕೆ ಒಳಿತು ಮಾಡಬೇಕು ಎಂದು ತಿಳಿಸಿದರು.

    ತಾಪಂ ಅಧ್ಯಕ್ಷ ಕೆ.ಸಿ.ರತನ್ ಮಾತನಾಡಿ, 2016ರಲ್ಲಿ ಪಂಚಾಯತ್ ರಾಜ್​ಕಾಯ್ದೆ ಮರು ಪರಿಶೀಲನೆ ನಡೆಸಿ ಮಹಿಳೆಯರು ಗ್ರಾಪಂ ಚುನಾವಣೆಗೆ ಸ್ಪರ್ಧಿಸಲು ಶೇ.50 ರಷ್ಟು ಮೀಸಲಾತಿ ನೀಡಿ ಆಂದೋಲನ ನಡೆಸಿ ಭ್ರಷ್ಟಾಚಾರ ರಹಿತ ಆಡಳಿತ ನಡೆಸಲು ಅವಕಾಶ ನೀಡಲಾಗಿದೆ. ವಿಧಾನಸಭೆ ಮತ್ತು ಲೋಕಸಭೆಗೂ ನೀಡಿದರೆ ಉತ್ತಮ ಆಡಳಿತ ನಡೆಸಲು ಸಹಕಾರಿಯಾಗುತ್ತದೆ. ಮಹಿಳೆಯರಿಗೆ ಆಡಳಿತ ನಡೆಸುವ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.

    ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಪ್ರಕೃತಿ ಕಲ್ಯಾಣ್​ಪುರ್, ವಕೀಲರ ಸಂಘದ ಅಧ್ಯಕ್ಷ ಮಹೇಶ್, ಸುಗ್ರಾಮ ರಾಜ್ಯಾಧ್ಯಕ್ಷೆ ಶಾಂತಕುಮಾರಿ, ಕಾರ್ಯದರ್ಶಿ ಮಂಜುಳಾ, ತಾಲೂಕು ಅಧ್ಯಕ್ಷೆ ಗಂಗಮ್ಮ, ವಿಕಸನ ಸಂಸ್ಥೆ ಸಂಯೋಜಕ ಶ್ರೀನಿವಾಸ್, ನಾಜಿಮ್ ಅಲ್ತಾಫ್ ಬಿಳಗುಳ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts