More

    ಮಹಿಳಾ ಮೀಸಲು ಮಸೂದೆ ಸ್ವಾಗತಾರ್ಹ

    ಮೂಡಲಗಿ: ಈಗಾಗಲೇ ಮಹಿಳಾ ಮೀಸಲಾತಿ ಜಾರಿಯಾಗಿರುವುದರಿಂದ ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇ.33 ಮಹಿಳಾ ಮೀಸಲು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ದೊರೆತಂತಾಗಿದೆ. ಮುಂದಿನ ವರ್ಷಗಳಲ್ಲಿ ಪುರುಷರಂತೆ ಮಹಿಳೆಯರು ಕೂಡ ರಾಜಕೀಯ ಸ್ಥಾನಮಾನ ಪಡೆಯಲಿದ್ದಾರೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು.

    ತಾಲೂಕಿನ ಯಾದವಾಡ ಗ್ರಾಮದಲ್ಲಿ ಮಹಿಳಾ ಸಂಘಗಳ ಚಟುವಟಿಕೆಗಳಿಗಾಗಿ ಎನ್‌ಆರ್‌ಎಂಎಲ್ ಯೋಜನೆಯಡಿ 18 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಟ್ಟಡ ಕಾಮಗಾರಿಗೆ ಶನಿವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಹಿಳಾ ಮೀಸಲಾತಿ ವಿಧೇಯಕ ಜಾರಿಗೊಳಿಸಿರುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ ಎಂದರು.

    ಯಾದವಾಡ ಗ್ರಾಮದ ಸರ್ವಾಂಗೀಣ ಅಭಿವದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ಈಗಾಗಲೇ ಅನುಷ್ಠಾನ ಮಾಡಲಾಗಿದೆ. ಗ್ರಾಮಾಭಿವದ್ಧಿಗೆ ಪಂಚಾಯಿತಿ ಸದಸ್ಯರು ಹಾಗೂ ಹಿರಿಯರು ಒಗ್ಗಟ್ಟಾಗಿ ಕರ್ತವ್ಯ ನಿರ್ವಹಿಸಬೇಕು. ಗ್ರಾಮವನ್ನು ಅಭಿವದ್ಧಿಪಡಿಸಬೇಕು. ಗ್ರಾಮದ ಬೀರಪ್ಪ ದೇವರ ದೇವಸ್ಥಾನದ ಸಮುದಾಯ ಭವನ ಮತ್ತು ಬೆಳಗಲಿ ಬಸಪ್ಪಜ್ಜನ ಸಮುದಾಯ ಭವನಗಳಿಗೆ ಆರ್ಥಿಕ ನೆರವು ಕಲ್ಪಿಸಿಕೊಡಲಾಗುವುದು ಎಂದರು. ಶಾಲಾ ಮಕ್ಕಳ ಆಟದ ಮೈದಾನಕ್ಕಾಗಿ ಗಿರಿಸಾಗರದಲ್ಲಿ ಜಾಗ ಗುರುತಿಸಿ ಶಾಲಾ ಮಕ್ಕಳಿಗೆ ಅನುಕೂಲ ಮಾಡಿಕೊಡುವಂತೆ ಗ್ರಾಪಂ ಕಮಿಟಿಗೆ ಸೂಚನೆ ನೀಡಿದರು.

    ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಯಾದವಾಡದ ಹೊನ್ನಮ್ಮದೇವಿ ದೇವಸ್ಥಾನದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಅವರ ಅಹವಾಲು ಸ್ವೀಕರಿಸಿದರು. ಗ್ರಾಮ ಪಂಚಾಯಿತಿ ಮತ್ತು ವಿವಿಧ ಸಂಘಗಳಿಂದ ಶಾಸಕರನ್ನು ಸತ್ಕರಿಸಲಾಯಿತು. ತಾಪಂ ಇಒ ಎ್.ಜಿ.ಚಿನ್ನನ್ನವರ, ಗ್ರಾಪಂ ಅಧ್ಯಕ್ಷ ಬಸವರಾಜ ಭೂತಾಳಿ, ಪರ್ವತಗೌಡ ಪಾಟೀಲ, ಮಹಿಳಾ ಸಂಘಗಳ ಪ್ರತಿನಿಧಿಗಳಾದ ವಿಜಯಲಕ್ಷ್ಮೀ ಅಂಬಲಿಮಠ, ಕಾವೇರಿ ಹುನಗುಂದ, ಸಂಜೀವಿನಿ ಮಂಟಾ, ಲಕ್ಷ್ಮೀ ಮಾಳೇದ, ಮುಖಂಡರಾದ ಯಲ್ಲಪ್ಪಗೌಡ ನ್ಯಾಮಗೌಡ, ಬೀರಪ್ಪ ಮುಗಳಖೋಡ, ಸುರೇಶ ಸಾವಳಗಿ, ಶ್ರೀಶೈಲ ಢವಳೇಶ್ವರ, ಮಲ್ಲಪ್ಪ ಚಕ್ಕೆನ್ನವರ, ಬಸವರಾಜ ಕೇರಿ, ಲಕ್ಷ್ಮಣ ಪಾಟೀಲ, ಕಲ್ಲಪ್ಪ ಗಾಣಿಗೇರ, ವೀರಣ್ಣ ಮೋಡಿ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts