ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು

ಅರಕಲಗೂಡು: ಉದ್ಯೋಗವನ್ನು ಕಂಡುಕೊಳ್ಳುವ ಮೂಲಕ ಮಹಿಳೆಯರು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಹಾಸನ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಸಿ.ಸುರೇಶ ಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜ ಶಾಸ್ತ್ರ ವಿಭಾಗದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನ ಪ್ರಯುಕ್ತ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಹಿಳೆಯರಿಗೆ ಭಾರತೀಯ ಪರಂಪರೆಯಲ್ಲಿ ಉನ್ನತ ಸ್ಥಾನಮಾನ ನೀಡಲಾಗಿದೆ ಎಂದರು.

ಇಂದಿನ ಆಧುನಿಕ ಯುಗದಲ್ಲಿ ಹೊಸ ಆವಿಷ್ಕಾರವನ್ನು ಮಾಡುವ ಮಟ್ಟಕ್ಕೆ ಮಹಿಳೆ ಬೆಳೆದಿದ್ದಾಳೆ. ಇಂದಿರಾಗಾಂಧಿ, ಮದರ್ ತೆರೇಸಾ, ಮೇರಿಕೊಮ್ ಉದಾಹರಣೆಗಳು ಇಲ್ಲಿ ಹೆಚ್ಚು ಪ್ರಸ್ತುತ ಎಂದು ಹೇಳಿದರು.

ಸಮಾಜಸಾಸ್ತ್ರ ವಿಭಾಗದ ಮುಖ್ಯಸ್ಥರಾದ ಎ.ಎಸ್. ಅನುರಾಧ, ಪ್ರಭಾರ ಪ್ರಾಂಶುಪಾರಾದ ಡಿ.ಆರ್. ಅನುರಾಧ ಮಾತಾನಾಡಿದರು. ಸಹಾಯಕ ಪ್ರಾಧ್ಯಾಪಕಿ ಎಸ್. ಅಶ್ವಿನಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಬಿ.ಮಂಜುನಾಥ್, ಎಚ್. ಲೀಲಾವತಿ, ಜಿ.ಕೆ.ಪುಷ್ಪಾ ಹಾಜರಿದ್ದರು.