More

    VIDEO| ಹೆಣ್ಣಿಗೆ ಹೆಣ್ಣೇ ಶತ್ರು; ಮಹಿಳೆಯರ ಬೆತ್ತಲೆ ಮೆರವಣಿಗೆ

    ಕೊಲ್ಕತ್ತ: ಗಲಭೆ ಪೀಡಿತ ಮಣಿಪುರದಲ್ಲಿ ಇತ್ತೀಚಿಗೆ ಬುಡಕಟ್ಟು ಸಮುದಾಯಕ್ಕೆ ಸೇರಿದ ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇದೀಗ ಅಂತಹ ಘಟನೆಯೊಂದು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ನಡೆದಿದೆ.

    ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆಯ ಪಕುವಾಹತ್​ ಮಾರುಕಟ್ಟೆ ಪ್ರದೇಶದಲ್ಲಿ ಘಟನೆ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ವೈರಲ್​ ಆಗಿರುವ ವಿಡಿಯೋದಲ್ಲಿ ಗುಂಪೊಂದು ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿವಸ್ತ್ರಗೊಳಿಸುತ್ತಿರುವುದು ಕಂಡು ಬರುತ್ತದೆ.

    ಘಟನೆಯ ಹಿನ್ನಲೆ

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಮಾಲ್ಡಾ ಜಿಲ್ಲೆಯ ಇಬ್ಬರು ಮಹಿಳೆಯರು ಪಕುವಾಹತ್​ ಮಾರುಕಟ್ಟೆ ಪ್ರದೇಶದಲ್ಲಿ ನಿಂಬೆಹಣ್ಣುಗಳನ್ನು ಕದಿಯಲು ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಸ್ವೀಟ್​ ಅಂಗಡಿ ಮಾಲೀಕರೊಬ್ಬರು ಕೂಡಲೇ ಇಬ್ಬರನ್ನು ಹಿಡಿದು ವಿಚಾರಿಸಿದಾಗ ಅವರು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

    ಇದನ್ನು ಗಮನಿಸಿದ ಸ್ಥಳೀಯರು(ಹೆಚ್ಚಾಗಿ ಮಹಿಳೆಯರಿದ್ದರು) ಕೂಡಲೇ ಇವರಿಬ್ಬರನ್ನು ಹಿಡಿದು ಥಳಿಸಿ ವಿವಸ್ತ್ರಗೊಳಿಸಿ ಮೆರವಣಿಗೆ ಮಾಡಿದ್ದಾರೆ. ವಿಚಾರ ತಿಳಿದು ಅಧಿಕಾರಿಗಳ ತಂಡ ಸ್ಥಳಕ್ಕೆ ದೌಡಾಯಿಸಿ ಗುಂಪನ್ನು ಚದುರಿಸಿ ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಇದನ್ನೂ ಓದಿ: ನಿರಂತರ ಮಳೆಯಿಂದಾಗಿ ಭೂ ಕುಸಿತ; ಮೃತರ ಸಂಖ್ಯೆ 21ಕ್ಕೆ ಏರಿಕೆ

    ಬಂಧಿಸಿದ್ದಾರೆ

    ಈ ಕುರಿತು ಪ್ರತಿಕ್ರಿಯಿಸಿರುವ ಸಂತ್ರಸ್ತೆಯ ಪುತ್ರಿ ನನ್ನ ತಾಯಿ ಹಾಗೂ ಚಿಕ್ಕಮ್ಮನನ್ನು ಪೊಲೀಸರು ಅಕ್ರಮವಾಗಿ ಬಂಧಿಸಿ ಠಾಣೆಯಲ್ಲಿ ಇರಿಸಿದ್ದಾರೆ. ನಮಗೆ ಈ ಬಗ್ಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದರು. ಪೊಲೀಸ್​ ಠಾಣೆಯ ಅಧಿಕಾರಿಗಳನ್ನು ಕೇಳಿದಾಗ ಸೋಮವಾರದ ನಂತರ ಬಿಟ್ಟು ಕಳುಹಿಸುವುದಾಗಿ ಹೇಳಿದ್ದಾರೆ.

    ಘಟನೆ ಸಂಬಂಧ ಯಾವುದೇ ದೂರು ದಾಖಲಾಗಿಲವಾದರೂ ಯಾಕೆ ಅವರನ್ನು ಠಾಣೆಯಲ್ಲಿ ಇರಿಸಿಕೊಳ್ಳಲಾಗಿದೆ ಎಂದು ಸಂತ್ರಸ್ತೆಯ ಪುತ್ರಿ ಪ್ರಶ್ನಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts