More

    ಸಮಸ್ಯೆಗಳನ್ನು ಹೋಗಲಾಡಿಸಲು ಶಿಕ್ಷಣಕ್ಕೆ ಆದ್ಯತೆ ನೀಡ

    ಮೈಸೂರು: ಗ್ರಾಮೀಣ ಪ್ರದೇಶದಲ್ಲಿನ ಬಂಜಾರ ಸಮುದಾಯದ ಮಹಿಳೆಯರ ಸಮಸ್ಯೆಗಳನ್ನು ಹೋಗಲಾಡಿಸುವ ಮೂಲಕ ಅವರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಬಂಜಾರ ಸಂಘದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಸಚಿವ ಅಮರ್‌ಸಿಂಗ್ ತಿಲಾವತ್ ಸಲಹೆ ನೀಡಿದರು.

    ವಿಜಯನಗರ ಎರಡನೇ ಹಂತ ಹಿನಕಲ್ ಬಳಿ ಇರುವ ಬಂಜಾರ ಭವನದಲ್ಲಿ ಮಂಗಳವಾರ ಆಯೋಜಿಸಿದ್ದ ಅಖಿಲ ಭಾರತ ಬಂಜಾರ ಸೇವಾ ಸಂಘದ ರಾಜ್ಯ ಮಹಿಳಾ ಘಟಕದ ಪದಾಧಿಕಾರಿಗಳ ಸಮಾವೇಶ ಹಾಗೂ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


    ಬಂಜಾರ ಸಮಾಜದವರು ತೊಡುವ ಸಾಂಪ್ರದಾಯಿಕ ಉಡುಗೆ, ತೊಡುಗೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು. ಬಂಜಾರ ಸಮುದಾಯದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಯಾವ ಸರ್ಕಾರಗಳು ಕೂಡ ಬಂಜಾರ ಸಮುದಾಯವನ್ನು ನಿರ್ಲಕ್ಷ ್ಯ ಮಾಡಬಾರದು ಎಂದು ಒತ್ತಾಯಿಸಿದರು.


    ಸಮುದಾಯದ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೂಲಕ ಉನ್ನತ ಸಾಧನೆ ಮಾಡಲು ಬೆಂಬಲ ನೀಡಬೇಕು. ಸಮುದಾಯದ ಮಹಿಳೆಯರು ಪರಂಪರೆಯಾಗಿ ಬಂದಿರುವ ಉಡುಗೆ, ತೊಡುಗೆ ಇಂದು ಮರೆಯಾಗುತ್ತಿವೆ. ಸಮಾಜದ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಿ ಈ ಪರಂಪರೆ ಉಳಿಸಿ ಬೆಳೆಸಲು ತರಬೇತಿ ನೀಡಬೇಕು. ಶಿಕ್ಷಣದ ಅರಿವು, ಜ್ಞಾನ ಮೂಡಿಸಲು ಹೋಬಳಿ, ತಾಲೂಕು, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಪ್ರಾತ್ಯಕ್ಷಿಕೆ ಶಿಬಿರಗಳನ್ನು ಆಯೋಜಿಸಬೇಕು. ಶಿಕ್ಷಣ ನೀಡುವ ಸಲುವಾಗಿ ಪ್ರತ್ಯೇಕ ಬಂಜಾರ ವಸತಿ ನಿಲಯ ಸ್ಥಾಪನೆ ಮಾಡಬೇಕು. ಉನ್ನತ ಶಿಕ್ಷಣ ಪಡೆಯಲು ಸೌಲಭ್ಯಗಳನ್ನು ಕಲ್ಪಿಸಬೇಕು. ಐಎಎಸ್, ಐಪಿಎಸ್ ಉಚಿತ ತರಬೇತಿ ಕೊಡಿಸಬೇಕು ಎಂದು ಆಗ್ರಹಿಸಿದರು.


    ಸಂಘದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ.ರಾಮಾನಾಯಕ್ ಅವರ ‘ಸಂಘರ್ಷದ ಬದುಕು’ ಹಾಗೂ ಇಂದುಮತಿ ಲಮಾಣಿ ಅವರ ‘ಝೂರ್ ಮೋತಿ’ ಕೃತಿಗಳನ್ನು ಬಿಡುಗಡೆ ಮಾಡಲಾಯಿತು.


    ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶೈಲಾಬಾಯಿ, ಪ್ರಧಾನ ಕಾರ್ಯದರ್ಶಿ ಪ್ರಮೀಳಾ ಚಂದ್ರನಾಯಕ್, ರಾಜ್ಯ ಅಧ್ಯಕ್ಷ ಪಾಂಡುರಂಗ ಪಮ್ಮರ್, ಅಬಕಾರಿ ಜಿಲ್ಲಾಧಿಕಾರಿ ಮಹಾದೇವಿಬಾಯಿ ಟಿ. ನಾಗವೇಣಿ, ಮಿಂಟೋ ಕಣ್ಣಿನ ಆಸ್ಪತ್ರೆ ನಿರ್ದೇಶಕಿ ಡಾ.ಸುಜಾತಾ ರಾಥೋಡ್, ಬಂಜಾರ ಸೇವಾ ಸಂಘದ ಅಧ್ಯಕ್ಷ ಆರ್.ಚಂದ್ರಶೇಖರ್ ನಾಯಕ್, ಪದಾಧಿಕಾರಿಗಳಾದ ಹೇಮಂತ್‌ಕುಮಾರ್, ಕಮಲಾ ಬಾಯಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts