More

    ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಮಹಿಳಾ ದಿನ ಆಚರಣೆ

    ಬೆಂಗಳೂರು: ಪ್ರತಿ ಕಾರ್ಯದಲ್ಲಿಯೂ ಸಮರ್ಥವಾಗಿ ಜವಾಬ್ದಾರಿ ನಿರ್ವಹಿಸುವ ಮಹಿಳಾ ಸರ್ಕಾರಿ ನೌಕರರಿಗೆ ಅತ್ಯಗತ್ಯವಿರುವ ಮೂಲ ಸೌಕರ್ಯವನ್ನು ಸಂದಿಂದ ಒದಗಿಸಬೇಕು. ಇದಕ್ಕೆ ಬೇಕಾದ ಸಹಾಯವನ್ನು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು ಡಾ. ಶಾಲಿನಿ ರಜನೀಶ್​ ಭರವಸೆ ನೀಡಿದ್ದಾರೆ.

    ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯ ನೌಕರರ ಸಂಘದ ಸಹಯೋಗದಲ್ಲಿ ಮಂಗಳವಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ರಾಜ್ಯದಲ್ಲಿ ಶೇ.45ರಷ್ಟು ಮಹಿಳಾ ಸರ್ಕಾರಿ ನೌಕರರಿದ್ದಾರೆ. ವೃತ್ತಿ ಸಮಸ್ಯೆಗಳ ಜತೆಗೆ ವೈಯಕ್ತಿಕ ಸಮಸ್ಯೆ ಬಗೆಹರಿಸಲು ಸಂದಿಂದ ನೀಡಬಹುದಾದ ಪರಿಹಾರಗಳ ಬಗ್ಗೆ ಚಿಂತಿಸಬೇಕು. ಜತೆಗೆ ಮಹಿಳಾ ನೌಕರರು ವೃತ್ತಿ ನಡೆಸುವ ಪ್ರತಿ ಕಚೇರಿಯಲ್ಲಿಯೂ ಪ್ರತ್ಯೇಕ ಶೌಚಾಲಯ, ವಿಶ್ರಾಂತಿ ಕೊಠಡಿ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು.

    ಮನೆ ನಿರ್ವಹಣೆ, ವೃತ್ತಿ ಸೇರಿದಂತೆ ಪ್ರತಿಯೊಂದು ಹಂತವನ್ನೂ ಸರಿಯಾಗಿ ನಿರ್ವಹಿಸುವ ಗುಣ ಹೆಣ್ಣಿನಲ್ಲಿದೆ. ಸ್ತ್ರೀಯರು ಸೂಕ್ಷ್ಮ ವಿಷಯಗಳನ್ನು ಗ್ರಹಿಸಿ, ಪ್ರತಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ. ಗಂಡು-ಹೆಣ್ಣು ಪ್ರಾಕೃತಿಕವಾಗಿ ಸಮಾನರು ಎಂದು ತಿಳಿಸಿದರು.

    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಮಾತನಾಡಿ, ಇಂದಿಗೂ ಹಳ್ಳಿಗಳಲ್ಲಿ ಅಸಮಾನತೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಕಿರುಕುಳ, ಭ್ರೂಣಹತ್ಯೆ, ಹಣಕಾಸಿಕ ದೌರ್ಜನ್ಯಗಳು ನಡೆಯುತ್ತಿವೆ. ಮಹಿಳೆಯರು ಸಂಟಿತರಾದರೆ ಈ ಎಲ್ಲಾ ಸಮಸ್ಯೆಗಳನ್ನು ಮೆಟ್ಟಿ ನಿಲ್ಲಬಹುದು. ಜತೆಗೆ ಶಿಕ್ಷಣದಿಂದ ಸಮಾಜವನ್ನು ಬದಲಾಯಿಸುವ ಶಕ್ತಿ ಮಹಿಳೆಯರಲ್ಲಿದೆ. ಇದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.

    ಸರ್ಕಾರಿ ನೌಕರರ ಸಂದ ಅಧ್ಯಕ್ಷ ಸಿ.ಎಸ್​.ಷಡಕ್ಷರಿ, ಪಂಚಾಯತ್​ ರಾಜ್​ ಆಯುಕ್ತೆ ಪ್ರಿಯಾಂಕ ಮೇರಿ ಪ್ರಾನ್ಸಿಸ್​ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts