ಮಹಿಳಾ ದಿನಾಚರಣೆ; ನಾಳೆ BMTCಯಲ್ಲಿ ಉಚಿತ ಪ್ರಯಾಣ

bmtc
Published on

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬಿಎಂಟಿಸಿ ಬಸ್​​ಗಳಲ್ಲಿ ನಾಳೆ (ಮಾ.8)ರಂದು ಒಂದು ದಿನ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಮಹಿಳಾ ದಿನಾಚರಣೆ ಅಂಗವಾಗಿ ಒಂದು ದಿನ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅನುಮತಿ ನೀಡಿ ಎಂದು ಸರ್ಕಾರಕ್ಕೆ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ (ಎಂ.ಡಿ) ಸತ್ಯವತಿ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆಯ ಸೆಕ್ರೆಟರಿ ಎನ್. ವಿ ಪ್ರಸಾದ್ ಇಂದು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚಣೆಯ ಅಂಗವಾಗಿ 2023 ಮಾರ್ಚ್​ 8 ರಂದು ಬೆಂಗಳೂರಿನ ಎಲ್ಲಾ ಸಾರಿಗೆ ಸೇವೆಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಒಂದು ದಿನ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net